Sunday, November 22, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಮೂವರು ಕಳ್ಳರ ಬಂಧನ

ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯ ಕುತ್ತಿಗೆಯಲ್ಲಿ ಚಿನ್ನದ ಸರ ಕದಿಯುತ್ತಿದ್ದ ಒಬ್ಬ ಸರಗಳ್ಳ ಹಾಗೂ ಇಬ್ಬರು ಮನೆಗಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಸರಗಳ್ಳ ಹಾಸನ ಜಿಲ್ಲೆಯ ಸಕಲೇಶಪುರದ ಸುದೀಪ, ಮನೆಗಳ್ಳರಾದ ಮೈಸೂರು ಜಿಲ್ಲೆಯ ಬನ್ನೂರು ಹೋಬಳಿ ಚಾಮನಹಳ್ಳಿಯ ಮಂಜು ಮತ್ತು ಗಣೇಶ್ ಎಂಬುವರನ್ನು ಬಂಧಿಸಲಾಗಿದೆ.

ಮದ್ದೂರು ಪಟ್ಟಣದ ಲೀಲಾವತಿ ಬಡಾವಣೆಯಲ್ಲಿ ಕಳೆದ ಮೇ ತಿಂಗಳಿನಲ್ಲಿ ಪುಟ್ಟಲಕ್ಷ್ಮಮ್ಮ ಅವರ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿ, ಆತನಿಂದ 20 ಗ್ರಾಂ ತೂಕದ 1 ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ