Thursday, November 19, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಎಸ್ ಪಕ್ಷದಿಂದ ಅರುಣ್ ಕುಮಾರ್ ನಾಮಪತ್ರ ಸಲ್ಲಿಕೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕೆ.ಆರ್.ಎಸ್ ಪಕ್ಷದ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಹೆಬ್ಬಕವಾಡಿ ಮಲ್ಲೇಗೌಡ ಗುರುವಾರ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಸಿಬಿ ಪಕ್ಷಗಳಿಗೆ ಅಂದರೆ ಜೆಡಿಎಸ್, ಕಾಂಗ್ರೆಸ್, ಬಿಜೆಪಿಗಳಿಗೆ ಪರ್ಯಾಯವಾಗಿ ಕೆ.ಆರ್.ಎಸ್ ಪಕ್ಷವು ಅಸ್ತಿತ್ವಕ್ಕೆ ಬಂದಿದೆ. ಭ್ರಷ್ಟಾಚಾರ ಮುಕ್ತ ಪಾರದರ್ಶಕ ರಾಜಕಾರಣಕ್ಕಾಗಿ ನಮ್ಮ ಪಕ್ಷವನ್ನು ಬೆಂಬಲಿಸಬೇಕು. ಈ ಬಾರಿ ಚುನಾವಣೆಯಲ್ಲಿ ಆಮಿಷಗಳಿಗೆ ಬಲಿಯಾಗದೇ ಯೋಗ್ಯರಿಗೆ ಮತ ನೀಡಬೇಕೆಂದು ಮನವಿ ಮಾಡಿದರು.

ಈ‌ ಸಂದರ್ಭದಲ್ಲಿ ಶ್ರಿರಂಗಪಟ್ಟಣ ತಾಲೂಕು ಅಧ್ಯಕ್ಷ ಪ್ರೇಮ್ ಕುಮಾರ್, ತಾಲೂಕು ಸಂಘಟನಾ ಕಾರ್ಯದರ್ಶಿಗಳಾದ ಮಲ್ಲೇಶ, ಸುನೀಲ್ ಕುಮಾರ್ ಎ, ಕೊತ್ತತ್ತಿ ಹೋಬಳಿ ಅಧ್ಯಕ್ಷ ರಾಮಕೃಷ್ಣ ಎಸ್, ಉಪಾಧ್ಯಕ್ಷ ರವೀಂದ್ರ, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ