Thursday, July 25, 2024

ಪ್ರಾಯೋಗಿಕ ಆವೃತ್ತಿ

ಅಭಿವೃದ್ಧಿ ಕುಂಠಿತ ಮಾಡಿರುವುದೇ ಕಾಂಗ್ರೆಸ್ ಸಾಧನೆ: ಅಶೋಕ್ ಜಯರಾಂ

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತ ಮಾಡಿರುವುದೇ ಕಾಂಗ್ರೆಸ್ ಸಾಧನೆ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅಶೋಕ್ ಜಯರಾಂ ಟೀಕಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದೇ ಸಾಧನೆ ಎಂದು ಕಾಂಗ್ರೆಸ್ ಸರ್ಕಾರ ಬಿಂಬಿಸಿಕೊಳ್ಳುತ್ತಿದೆ. ಆದರೆ ಈ ಯೋಜನೆಗಳನ್ನು ಸಮರ್ಪಕವಾಗಿ ಎಲ್ಲ ವರ್ಗದವರಿಗೂ ನೀಡಿಲ್ಲ. ಬೆಲೆ ಏರಿಕೆಯ ಭಯ ಎಲ್ಲಾ ವರ್ಗದವರನ್ನು ಕಾಡುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ 11,000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಬಳಸಿಕೊಳ್ಳಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತ ಗೊಂಡಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಟೀಕಿಸಿದರು.

ಕಳೆದ ಬಜೆಟ್ ನಲ್ಲಿ ರೈತರಿಗೆ ಹಾಲಿನ ಪ್ರೋತ್ಸಾಹ ಧನಕ್ಕೆ ಬಿಡುಗಡೆಯಾಗಿದ್ದ ಹಣವನ್ನು ಪಶುಪಾಲನಾ ಇಲಾಖೆ ಇತರೆ ಖರ್ಚು ವೆಚ್ಚಗಳಿಗೆ ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಷಯದ ಬಗ್ಗೆ ಸರ್ಕಾರ ಸ್ಪಷ್ಟನೆಯನ್ನು ನೀಡಬೇಕು. ರೈತರಿಗೆ ಬಾಕಿ ಉಳಿದಿರುವ ಎಂಟು ತಿಂಗಳ ಬಾಕಿ ಹಣವನ್ನು ಯಾವಾಗ ಕೊಡುತ್ತಾರೆ ಎಂದು ರೈತರು ಪ್ರಶ್ನಿಸಿದರೆ, ಹಾಲು ಒಕ್ಕೂಟದ ಅಧಿಕಾರಿಗಳು ಸಹಕಾರಿ ಇಲಾಖೆಯತ್ತ ಬೊಟ್ಟು ಮಾಡುತ್ತಾರೆ. ಸಹಕಾರ ಇಲಾಖೆಯವರು ಆರ್ಥಿಕ ಇಲಾಖೆ ಮೇಲೆ ಬೊಟ್ಟು ಮಾಡುತ್ತಾರೆ. ಈ ಗೊಂದಲದ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಹಾಲಿನ ಪ್ರೋತ್ಸಾಹ ಧನವೂ ಇಲ್ಲ. ಬರ ಪರಿಹಾರದ ಹಣವೂ ಇಲ್ಲ.ಭೂ ಸಿರಿ ಮತ್ತು ರೈತ ವಿದ್ಯಾನಿಧಿ ಯೋಜನೆಯನ್ನು ನಿಲ್ಲಿಸಲಾಗಿದೆ.25 ಸಾವಿರಕ್ಕೆ ಸಿಗುತ್ತಿದ್ದ ಟ್ರಾನ್ಸ್ ಫಾರ್ಮರ್ ಗಳಿಗೆ 2 ರಿಂದ 2.50 ನೀಡ ಬೇಕಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದೆ, ಮುದ್ರಾಂಕ ದರವನ್ನು ಏರಿಸಿದೆ, ಆಸ್ತಿ ನೋಂದಣಿ ಶೇ.30 ರಷ್ಟು ಹೆಚ್ಚಾಗಿದೆ, ಕ್ಷೀರ ಸಮೃದ್ಧಿ ಬ್ಯಾಂಕ್ ಯಾಕೆ ಪ್ರಾರಂಭಿಸಿಲ್ಲ, 824 ರೈತರ ಆತ್ಮ ಹತ್ಯೆಗೆ ಕಾರಣಗಳೇನು? ಮತ್ತು ರೈತರಿಗೆ ಅತ್ಯಂತ ನಿಕಟ ವಾಗಿರುವ ಇಲಾಖೆ ಕಂದಾಯ ಇಲಾಖೆ, ಆರೋಗ್ಯ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ.ಶೇ.40 ಕ್ಕಿಂತ ಹೆಚ್ಚಾಗಿದೆ ಎಂದರು.

ಬೆಲೆ ಏರಿಕೆಯನ್ನು ಬಳುವಳಿಯಾಗಿ ಕೊಟ್ಟ ಕಾಂಗ್ರೆಸ್ ಸರ್ಕಾರ ( ವಿದ್ಯುತ್‌ ದರ, ಪಶು ಆಹಾರಕ್ಕೆ ಪ್ರತಿ ಮೆಟ್ರಿಕ್ ಟನ್ ಗೆ ರೂ. 500 ಹೆಚ್ಚಿಸಿದೆ. ಹಾಲಿನ ದರವನ್ನು ರೂ.4ರಷ್ಟನ್ನು ಏರಿಸಿ ಆ ಹಣವನ್ನು ರೈತರಿಗೆ ತಲುಪಿಸಲಾಗುವುದು ಎಂದು ಹೇಳಿಕೆ ಕೊಟ್ಟು, ಏಕೆ ರೈತರಿಗೆ ತಲುಪಿಸಿಲ್ಲ. ಮತ್ತೆ ಈಗ ಅದೇ ಕಾರಣವನ್ನು ನೀಡಿ 2 ರೂ ಹೆಚ್ಚಿಸಲಾಗಿದೆ. ಒಟ್ಟು ಈ 6 ರೂಗಳನ್ನು ಯಾವಾಗ ರೈತರಿಗೆ ನೀಡುತ್ತೀರಿ ಎಂದರು.
ಮೈ ಶುಗ‌ರ್ ಕಂಪನಿಯು ರೈತರು ಬೆಳೆದಿರುವ ಕಬ್ಬನ್ನು ತಕ್ಷಣ ಅರೆಯಲು ಪ್ರಾರಂಭ ಮಾಡಬೇಕು. ಕಾವೇರಿ

ವಿಸಿ ನಾಲ ಕಾಮಗಾರಿಯನ್ನು ಕಳಪೆ ಕಾಮಗಾರಿ ಎಂದು ಸಾರ್ವಜನಿಕರೇ ಆರೋಪ ಮಾಡಿರುವುದನ್ನು ಇಲ್ಲಿಯವರೆಗೆ ಸರ್ಕಾರ ಏಕೆ ಗಣನೆಗೆ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದರು.

ನಾಳೆ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ, ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾಳೆ ಜೂನ್ 29 ರಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.
ಮುಖಂಡರಾದ ಹನಿಯಂಬಾಡಿ ನಾಗರಾಜು,ಜವರೇಗೌಡ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!