Thursday, November 19, 2026

ಪ್ರಾಯೋಗಿಕ ಆವೃತ್ತಿ

ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ

ಕಬ್ಬು ಬೆಳೆಗೆ ರಾಜ್ಯ ಸಲಹಾ ಬೆಲೆ ನೀಡುವಂತೆ ಆಗ್ರಹಿಸಿ ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟದಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ತವಾರ ಪ್ರತಿಭಟನೆ ನಡೆಯಿತು.

ಮಂಡ್ಯನಗರದ ಸರ್‌ಎಂವಿ ಪ್ರತಿಮೆಯಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ರಾಜ್ಯದಲ್ಲಿ ಸುಮಾರು 9 ವರ್ಷದಿಂದ ರಾಜ್ಯ ಸರ್ಕಾರ ಕಬ್ಬಿಗೆ ರಾಜ್ಯ ಸಲಹಾ ಬೆಲೆ ನೀಡದೇ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಇತ್ತೀಚೆಗೆ ಉತ್ತರಪ್ರದೇಶ ಸರ್ಕಾರ ಪ್ರತಿ ಟನ್‌ಗೆ 3,500 ರೂ. ಸಲಹಾ ಬೆಲೆ ನಿಗದಿಪಡಿಸಿದೆ. ಅಂತೆಯೇ ಪಂಜಾಬ್ ಸರ್ಕಾರ ಪ್ರತಿ ಟನ್‌ಗೆ 3,800 ರೂ ನೀಡುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ಕಬ್ಬಿನ ಉಪ ಉತ್ಪನ್ನಗಳಿಂದ ವಿವಿಧ ರೀತಿಯ ತೆರಿಗೆ ಮೂಲಕ 30 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಿಸಲಾಗುತ್ತಿದೆ. ಹೀಗಿದ್ದರೂ ಸಲಹಾ ಬೆಲೆ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೂಲಿ ಕಾರ್ಮಿಕರ ವೆಚ್ಚ, ರಸಗೊಬ್ಬರ, ಕೃಷಿ ಪರಿಕರ ವೆಚ್ಚ ಹೆಚ್ಚಾಗಿದೆ. ಇದರಿಂದಾಗಿ ಹಾಕಿದ ಬಂಡವಾಳವೂ ಬರುತ್ತಿಲ್ಲ. ಪರಿಣಾಮ ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಆದ್ದರಿಂದ ಕೃಷಿ ಉತ್ಪಾದನಾ ವೆಚ್ಚ ಪರಿಗಣಿಸಿ ಬೇರೆ ರಾಜ್ಯಗಳಂತೆ ಸಲಹಾ ಬೆಲೆಯನ್ನು ತಕ್ಷಣವೇ ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ಎಸ್.ಕೃಷ್ಣ ಕೀಲಾರ, ಸಾತನೂರು ವೇಣುಗೋಪಾಲ್, ಎಂ.ಎಲ್.ತುಳಸೀಧರ್, ಹೆಮ್ಮಿಗೆ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ