ಸೋನಿತ್ಪುರ್: ಅಸ್ಸಾಂನ ಸೋನಿತ್ಪುರ ಜಿಲ್ಲೆಯ ಚಹಾ ತೋಟವೊಂದರಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ಮಂಗಳವಾರ ಧೆಕಿಯಾಜುಲಿ ಬಳಿಯ ಮುಹಿನಿಪುರ್ ಚಹಾ ತೋಟದಲ್ಲಿ ನಡೆದಿದೆ. ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡು ತನಿಖೆ ಆರಂಭಿಸಿದ್ದು, ಆರೋಪಿ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಪೊಲೀಸರು ಆರೋಪಿಯನ್ನು ಗುರುತಿಸಿದ್ದು, ಶೀಘ್ರದಲ್ಲೇ ಆತನನ್ನು ಹಿಡಿಯಲಿದ್ದಾರೆ ಎಂದು ಸೋನಿತ್ಪುರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿರಿಂಚಿ ಬೋರಾಹ್ ತಿಳಿಸಿದ್ದಾರೆ. “ಇಂದು ಮುಹಿನಿಪುರ ಚಹಾ ತೋಟದ ಹಾತ್ಖುಲಾ ಲೈನ್ನಲ್ಲಿ ಅಪ್ರಾಪ್ತ ಬಾಲಕಿಯ ಮೃತದೇಹ ಪತ್ತೆಯಾಗಿದ್ದು ಎಂಬ ಮಾಹಿತಿ ನಮಗೆ ತಿಳಿದು ಬಂದಿತು. ನಾವು ತಕ್ಷಣ ಸ್ಥಳಕ್ಕೆ ತಲುಪಿ ಶವವನ್ನು ಹೊರತೆಗೆದಿದ್ದೇವೆ. ನಾವು ನಮ್ಮ ತನಿಖೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಅಪರಾಧಿಯನ್ನು ಗುರುತಿಸಿದ್ದೇವೆ ಮತ್ತು ಶೀಘ್ರದಲ್ಲೇ ಬಂಧಿಸುತ್ತೇವೆ. ಎಂದು “ಬಿರಿಂಚಿ ಬೋರಾಹ್ ಹೇಳಿದರು.
ಮತ್ತೊಂದೆಡೆ, ಸ್ಥಳೀಯರು ಜಿಲ್ಲಾಡಳಿತ ಮತ್ತು ಪೊಲೀಸರು ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. 6 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಆಡಳಿತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.




