ವರದಿ : ಪ್ರಭು ವಿ ಎಸ್
ಮನೆಯ ಮಹಡಿ ಮೇಲೆ ಪ್ಲಾಸ್ಟಿಕ್ ಪಾಟ್ ಗಳಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ 25 ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿರುವ ಮದ್ದೂರು ಗ್ರಾಮಾಂತರ ಪೋಲೀಸರು ಶುಕ್ರವಾರ ದಾಳಿ ನಡೆಸಿ ವಶಪಡಿಸಿಕೊಂಡು, ಆರೋಪಿಯನ್ನು ವಶಕ್ಕೆ ವಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮದ್ದೂರು ತಾಲೂಕಿನ ಕೊಪ್ಪ ಪೋಲೀಸ್ ಠಾಣಾ ವ್ಯಾಪ್ತಿಯ ಹಳೇಹಳ್ಳಿ ಗ್ರಾಮದ ಕರಿಯಪ್ಪ ಬಿನ್ ನಿಂಗೇಗೌಡ ಬಂಧಿತ ವ್ಯಕ್ತಿಯಾಗಿದ್ದಾರೆ. ಈತ ತನ್ನ ಮನೆಯ ಮೇಲಿನ ಮಹಡಿಯ ಪ್ಲಾಸ್ಟಿಕ್ ಪಾಟ್ ಗಳಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ಮದ್ದೂರು ಗ್ರಾಮಾಂತರ ವೃತ್ತ, ನಿರೀಕ್ಷಕ ವೆಂಕಟೇಗೌಡ ಅವರ ಮಾರ್ಗದರ್ಶನದಲ್ಲಿ ಕೊಪ್ಪ ಪೋಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಹಾಗೂ ಸಿಬ್ಬಂದಿಗಳು ದಾಳಿ ಮಾಡಿ 3 ಕೆಜಿ 664 ಗ್ರಾಂ ತೂಕದ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡಿದ್ದಾರೆ:
ಆರೋಪಿ ವಿರುದ್ಧ ಕಲಂ 20(ಎ)(i) ಎನ್.ಟಿ.ಪಿ.ಎಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದ್ದು, ಕೊಪ್ಪ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




