Tuesday, October 22, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ಯುವಕನ ಮೇಲೆ ಹಲ್ಲೆ: ಪ್ರಕ್ಷುಬ್ದ ಸ್ಥಿತಿ

ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಪಟ್ಟಣದಲ್ಲಿ ಕಳೆದ ಸೋಮವಾರ ಸಂಜೆ ಅಭಿಲಾಷ್ ಎಂಬ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದಿದ್ದು, ಪ್ರಕ್ಷುಬ್ದ ಸ್ಥಿತಿ ನಿರ್ಮಾಣವಾಗಿದೆ. ಎಲ್ಲೆಡೆ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದ್ದು ಗಾಯಾಳು ಅಭಿಲಾಶ್ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಿಂದೂ ಯುವಕನ ಮೇಲೆ ಅನ್ಯ ಕೋಮಿನ ಗುಂಪು ಮಾರಣಾಂತಿಕ ಹಲ್ಲೆ ಮಾಡಿ, ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಲಾಗಿದೆ. ಅಭಿಲಾಶ್ ಮೇಲೆ ಗುಂಪು ಹಲ್ಲೆ ನಡೆದಿದ್ದು, ಮನೆಗಳಿಗೆ ನುಗ್ಗಿ ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಅಭಿಲಾಶ್, ನಾಗೇಶ್ ಮತ್ತು ಅನ್ಯ ಕೋಮಿನ ಯುವಕರ ನಡುವೆ ಸಣ್ಣ ವಿಚಾರಕ್ಕೆ ಮಾತಿನ ಚಕಮಕಿ ನಡೆದಿತ್ತು, ಈ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.  ಪ್ರಕರಣದ ಹಿನ್ನೆಲೆಯಲ್ಲಿ ಬೆಳ್ಳೂರು ಪಟ್ಟಣದಲ್ಲಿ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದು, ಪಟ್ಟಣದ ಆಯಾ ಕಟ್ಟಿನ ಪ್ರದೇಶ, ಪೊಲೀಸ್ ಠಾಣೆ ಹಾಗೂ ಆದಿಚುಂಚನಗಿರಿ ಆಸ್ಪತ್ರೆ ಬಳಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಬೆಳ್ಳೂರಿಗೆ ಭೇಟಿ ನೀಡಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಮಾಜಿ ಶಾಸಕ ಸುರೇಶ ಗೌಡ, ಘಟನಾ ಸ್ಥಳಕ್ಕೆ ಭೇಟಿ ನೀಡಿ ನೊಂದ ಮಹಿಳೆಯರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ಮಾಹಿತಿ ಪಡೆದು, ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಮಹಿಳೆಯರಿಗೆ ಬೆದರಿಕೆ ಹಾಕಿದ್ದಲ್ಲದೆ ಮನೆಗಳಿಗೆ ಹಾನಿ ಮಾಡಲಾಗಿದೆ, ತಪ್ಪಿತಸ್ತರ ಮೇಲೆ ಪೊಲೀಸರು ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!