Thursday, September 19, 2024

ಪ್ರಾಯೋಗಿಕ ಆವೃತ್ತಿ

ಚುನಾವಣಾ ಅಕ್ರಮ ತಡೆಗೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕಣ್ಗಾವಲು

ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿದ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಮಂಡ್ಯ ಜಿಲ್ಲೆಯಾದ್ಯಂತ ಚುನಾವಣಾ ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಅಕ್ರಮ ಚಟುವಟಿಕೆ ತಡೆಯಲು 24×7 ಕಣ್ಗಾವಲು ಇರಿಸಲಾಗಿದೆ. ಚುನಾವಣೆ ನೀತಿ ಸಂಹಿತೆ ಘೋಷಣೆಯಾದ ಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಿಲ್ಲಾದ್ಯಂತ ಜಾರಿಯಾಗಿದ್ದು, ಇಂದು ಬೆಳಿಗ್ಗೆಯಿಂದಲೇ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣಾ ಕಾರ್ಯ ನಡೆಯಿತು.

ಮಂಡ್ಯ ನಗರದ ಕಲ್ಲಳ್ಳಿಯ ಜ್ಯೋತಿ ಇಂಟರ್ ನ್ಯಾಷನಲ್ ಹೋಟೆಲ್ ಮುಂದೆ ಚೆಕ್ ಪೋಸ್ಟ್ ಸ್ಥಾಪಿಸಲಾಗಿದ್ದು, ಮೈಸೂರು ಕಡೆಯಿಂದ ಬರುವ ಕಾರುಗಳು, ಟ್ರಕ್ ಗಳು ಮೊದಲಾದ ವಾಹನಗಳನ್ನು ಅಧಿಕಾರಿಗಳು ಹಾಗೂ ಪೊಲೀಸರು ತಪಾಸಣೆ ಮಾಡಿ ಕಳುಹಿಸುತ್ತಿದ್ದ ದೃಶ್ಯ ಕಂಡು ಬಂತು. ವಾಹನ ಸವಾರರು ಕೂಡ ಪೊಲೀಸರಿಗೆ ಸಹಕರಿಸಿ ವಾಹನ ತಪಾಸಣೆಗೆ ಅನುವು ಮಾಡಿಕೊಟ್ಟರು.

1.54 ಕೋಟಿ ವಸ್ತು ವಶ
ಜಿಲ್ಲೆಯಲ್ಲಿ ಈಗಾಗಲೇ 1.54 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 34 ಚೆಕ್ ಪೋಸ್ಟ್, 35 ಫ್ಲೈಯಿಂಗ್ ಸ್ಕ್ವಾಡ್, 21 ವಿಡಿಯೋ ಸರ್ವೆಲೆನ್ಸ್ 14 ತೆರಿಗೆ,21 ಮಾಸ್ಟರ್ ತರಬೇತಿದಾರರನ್ನು ನಿಯೋಜಿಸಲಾಗಿದೆ. ಚುನಾವಣಾ ಅಕ್ರಮ ಸಂಬಂಧ ಇಲ್ಲಿಯವರೆಗೆ 46 ಲಕ್ಷ ನಗದು ಸೇರಿದಂತೆ 1.54 ಕೋಟಿ ಮೌಲ್ಯದ ವಸ್ತುಗಳು, ಮದ್ಯ, ಡ್ರಗ್ಸ್ ಉಚಿತ ಉಡುಗೊರೆ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.

ರೌಡಿ ಶೀಟರ್ ಗಳ ಗಡಿಪಾರು
ಚುನಾವಣೆ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಏಳು ಮಂದಿ ರೌಡಿಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಇನ್ನು ಏಳು ಮಂದಿ ರೌಡಿಶೀಟರ್ ಗಳನ್ನು ಗಡಿಪಾರು ಮಾಡುವ ಸಂಬಂಧ ಉಪವಿಭಾಗದ ಕಚೇರಿಯಲ್ಲಿ ವಿಚಾರಣಾ ಹಂತದಲ್ಲಿದೆ ಎಂದು ಎಸ್ಪಿ ಎನ್.ಯತೀಶ್ ತಿಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!