Sunday, May 19, 2024

ಪ್ರಾಯೋಗಿಕ ಆವೃತ್ತಿ

ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ : ಮೇ 10ಕ್ಕೆ ಮತದಾನ- ಮೇ.13ಕ್ಕೆ ಮತ ಎಣಿಕೆ


  • ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ : ಏಪ್ರಿಲ್ 13ಕ್ಕೆ ಅಧಿಸೂಚನೆ ಪ್ರಕಟ

  • ಏ.20ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ : ಏ.21ರಂದು ನಾಮಪತ್ರಗಳ ಪರಿಶೀಲನೆ

ಅಂತೂ ಇಂತೂ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಕೇಂದ್ರ ಚುನಾವಣಾ ಆಯೋಗವು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ.

ಮೇ 10ರ ಬುಧವಾರದಂದು 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ಮೇ 13ರ ಶನಿವಾರದಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು ನಡೆಸಿ,​ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದಾರೆ. ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲೇ ಮತದಾನ ನಡೆಯಲಿದೆ. ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ. ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ. ಮೇ 10ರ ಬುಧವಾರದಂದು 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ಮೇ 13ರ ಶನಿವಾರದಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.

80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ

ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಮಾಹಿತಿ ನೀಡಿದರು.

 9,17,241 ಹೊಸ ಮತದಾರರು

ಇದೇ ಮೊದಲ ಬಾರಿಗೆ ಮತದಾನ ಮಾಡುವ 18-19 ವಯಸ್ಸಿನ ಮತದಾರರ ಸಂಖ್ಯೆ 9,17,241. ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಜೇನುಕುರುಬ, ಕಾಡುಕುರುಬ ಮತದಾರರಿಗೆ ಪ್ರತ್ಯೇಕ ಬೂತ್​ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಲ್ಲಿ 58,282 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ನಗರ ಪ್ರದೇಶದಲ್ಲಿ 24,063 ಮತಗಟ್ಟೆಗಳ ಸ್ಥಾಪನೆ, ಗ್ರಾಮಾಂತರ ಪ್ರದೇಶದಲ್ಲಿ 34,219 ಮತಗಟ್ಟೆ, ಮಹಿಳಾ ಸಿಬ್ಬಂದಿ ನಿರ್ವಹಿಸುವ ಮತಗಟ್ಟೆಗಳ ಸಂಖ್ಯೆ 1,320, 224 ಕ್ಷೇತ್ರಗಳಲ್ಲಿ ತಲಾ ಒಂದು ಯುವ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ.

ನೀತಿ ಸಂಹಿತೆ ಜಾರಿ ಬಳಿಕವೂ ಸಿಎಂಗೆ ಇರುವ ಸವಲತ್ತುಗಳು

ನೀತಿ ಸಂಹಿತೆ ಜಾರಿ ಬಳಿಕವೂ ಸಿಎಂಗೆ ಕೆಲ ಸವಲತ್ತುಗಳು ಸಿಗಲಿವೆ. ಸಿಎಂ ಸರ್ಕಾರಿ ಕಾರನ್ನು ಕಚೇರಿ, ವಿಧಾನಸೌಧಕ್ಕೆ ಬಳಸಬಹುದು. ಆದ್ರೆ ಜಿಲ್ಲಾ ಪ್ರವಾಸ, ಪ್ರಚಾರಗಳಿಗೆ ಸರ್ಕಾರಿ ವಾಹನ ಬಳಕೆ ನಿರ್ಬಂಧವಿರುತ್ತೆ. ಸಿಎಂಗೆ ಇರುವ ಭದ್ರತೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಆದೇಶ ಮಾಡುವ, ಸಹಿ ಹಾಕುವ, ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಧಿಕಾರ ಇರಲ್ಲ. ಪಕ್ಷದ ಕಾರ್ಯಕ್ರಮ, ಸಮಾವೇಶದಲ್ಲಿ ಭಾಗವಹಿಸಬಹುದು.

ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ದ ಸಿದ್ದರಾಮಯ್ಯ

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಕಾಂಗ್ರೆಸ್ ಪಕ್ಷ ಚುನಾವಣೆಗೆ ಸಿದ್ಧವಾಗಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಚುನಾವಣೆ ಮುಕ್ತ, ಪಾರದರ್ಶಕವಾಗಿ ನಡೆಯಬೇಕು. ಚುನಾವಣೆ ವೇಳೆ ನಡೆಯುವ ಅಕ್ರಮಗಳನ್ನು ತಡೆಯಬೇಕು. ಆಡಳಿತ ಪಕ್ಷ ಸೇರಿ ಯಾರೇ ಅಕ್ರಮ ನಡೆಸಿದ್ರೂ ಕ್ರಮ ಕೈಗೊಳ್ಳಬೇಕು. ಆಡಳಿತ ಪಕ್ಷದವರು ಪ್ರಭಾವ ಬೀರುವ ಅವಕಾಶ ಇರುತ್ತೆ. ಅಕ್ರಮಗಳನ್ನು ತಡೆಯುವ ಕೆಲಸ ಆಗಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿರುವ ಮತಗಟ್ಟೆಗಳೆಷ್ಟು ?
ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳು ಇರಲಿವೆ. ಒಂದು ಮತಗಟ್ಟೆಯಲ್ಲಿ 883 ಜನ ಮತ ಹಾಕಬಹುದಾಗಿದೆ. ನಗರ ಪ್ರದೇಶಗಳಲ್ಲಿ 24,063 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 34,219 ಮತಗಟ್ಟೆಗಳು ಇರಲಿವೆ. ಹಾಗೇ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಲಾಗುವುದು. ಅಂಗವಿಕಲರಿಗೆ ವ್ಹೀಲ್​ಚೇರ್ ವ್ಯವಸ್ಥೆ ಇರಲಿದೆ.

ರಾಜ್ಯದಲ್ಲಿ ಎಷ್ಟು ಮತದಾರರು?
ರಾಜ್ಯದಲ್ಲಿ 5,21,73,579 ಜನ ಮತದಾರರಿದ್ದಾರೆ. 2,62,42,561 ಜನ ಪುರುಷ ಮತದಾರರು ಹಾಗೂ 2,59,26,319 ಮಹಿಳಾ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟವರು 12,15,763 ಜನ ಇದ್ದಾರೆ. 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. 9,17,241 ಮಂದಿ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 4,699 ತೃತೀಯ ಲಿಂಗಿ ಮತದಾರರಿದ್ದಾರೆ. 17 ವರ್ಷ ಮೇಲ್ಪಟ್ಟವರು 1,25,406 ಮಂದಿ ಅರ್ಜಿ ಸಲ್ಲಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!