Thursday, November 19, 2026

ಪ್ರಾಯೋಗಿಕ ಆವೃತ್ತಿ

 ನ.7ಕ್ಕೆ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಇವರುಗಳ ಸಂಯುಕ್ತಾಶ್ರಯದಲ್ಲಿ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಎಂ.ಎಸ್. ಕಾಯ್ದೆ 2013ರಂತೆ ಸಫಾಯಿ ಕರ್ಮಚಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ನ.7ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು. ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತಿರಿರುವರು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಅವರಿಂದ ನಾಟಕ ಪ್ರದರ್ಶನದ ಉದ್ಘಾಟನೆಯನ್ನು ನೆರವೇರಲಿದೆ, ಮುಖ್ಯ ಅತಿಥಿಗಳಾಗಿ ಸಂಸದರಾದ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಡಿ.ಸಿ.ತಮ್ಮಣ್ಣ, ವಿಧಾನಸಭಾ ಸದಸ್ಯರಾದ ಸಿ.ಎಸ್. ಪುಟ್ಟರಾಜು, ಸುರೇಶ್‍ಗೌಡ, ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ನಗರಸಭೆ ಅಧ್ಯಕ್ಷರಾದ ಹೆಚ್.ಎಸ್.ಮಂಜು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಶ್ರೀನಿವಾಸ್, ನಗರಸಭೆ ಉಪಾಧ್ಯಕ್ಷರಾದ ಇಷ್ರತ್ ಫಾತಿಮಾ, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ ಭಾಗವಹಿಸುವರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ