Wednesday, November 18, 2026

ಪ್ರಾಯೋಗಿಕ ಆವೃತ್ತಿ

ಭವಿಷ್ಯ ರೂಪಿಸಿಕೊಳ್ಳಲು ಶೈಕ್ಷಣಿಕ ಕಾರ್ಯಾಗಾರ ಅಗತ್ಯ: ಎ.ಟಿ ಶಿವರಾಮು

ನಿಮ್ಮೊಳಗಿರುವ ಜ್ಞಾನ ನಿಮ್ಮನ್ನು ಬಹು ಎತ್ತರಕ್ಕೆ ಕೊಂಡೊಯ್ಯುತ್ತದೆ, ಶೈಕ್ಷಣಿಕ  ಸದಾವಕಾಶಗಳಿಂದ ಸಾಧ್ಯವಾದಷ್ಟು ಗಳಿಸಿ, ಜ್ಞಾನದ ಪ್ರಬುದ್ಧತೆಯನ್ನು ಸಾಧಿಸಲು ಕಾರ್ಯಾಗಾರ ಅತ್ಯಗತ್ಯ ಎಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಡಳಿತಾಧಿಕಾರಿ ಡಾ.ಎ.ಟಿ.ಶಿವರಾಮು ಅಭಿಪ್ರಾಯಪಟ್ಟರು.
ನಾಗಮಂಗಲ ತಾಲ್ಲೂಕಿನ ಬಿಜಿ ನಗರದ ಬಿಜಿಎಸ್ ಪಿಯು ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ “ಸ್ಮರಣ ಶಕ್ತಿ ವೃದ್ಧಿ ಹಾಗೂ ಜೀವನ ಕೌಶಲ್ಯಗಳು” ಕುರಿತ 10 ದಿನಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪದವಿಪೂರ್ವ ಶಿಕ್ಷಣವು ಉನ್ನತ ಶಿಕ್ಷಣದ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಹಂತವು ಸರಿಯಾದ ಸಂಕಲ್ಪ ಶಕ್ತಿಯಿಂದ ಶ್ರೇಷ್ಠ ಗುರಿಯನ್ನು ನಿರ್ಣಯಿಸುವ ಹಾಗೂ ಸಾಧನೆಯ ಹಾದಿಯಲ್ಲಿ ಕ್ರಮಿಸಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವ ನಿರ್ಣಾಯಕ ಘಟ್ಟವಾಗಿದೆ. ಶಿಕ್ಷಣಕ್ಕೆ ಶಕ್ತಿ ತುಂಬುವ ಪ್ರತಿಯೊಂದು ಕಾರ್ಯಾಗಾರದ ಉಪಯೋಗದಿಂದ ವ್ಯಾಸಂಗಿಕ ತಂತ್ರಗಾರಿಕೆ ಮತ್ತು ಜೀವನ ಕೌಶಲ್ಯಗಳನ್ನು ರೂಢಿಸಿಕೊಂಡು ಯಶಸ್ವಿ ಸಾಧಕರಾಗಿ ಎಂದು ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಟಿ ಎನ್ ಶಿಲ್ಪಾ ಪ್ರಾಸ್ತಾವಿಕ ನುಡಿಯನ್ನಾಡಿದರು. ಬಿಜಿಎಸ್ ಮಾಡೆಲ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ವಿ ಪುಟ್ಟಸ್ವಾಮಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.
ಮಾನವ ಸಂಪನ್ಮೂಲ ಕ್ಷೇತ್ರದ ಅಂತರ ರಾಷ್ಟ್ರೀಯ ತರಬೇತುದಾರ ಆರ್ ಸತೀಶ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು 10 ದಿನಗಳ ಈ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ. ಪ್ರತಿದಿನ ಎರಡು ತಂಡಗಳಲ್ಲಿ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿ ಪಡೆಯಲಿದ್ದಾರೆ.
ಸಮಾರಂಭದಲ್ಲಿ ಉಪನ್ಯಾಸಕರಾದ ಎಂ ಆರ್ ವೇದಮೂರ್ತಿ, ಎನ್ ಎಸ್ ಚಂದನ್, ಭವ್ಯಶ್ರೀ ಎಲ್ ಕೆ, ಮೀನಾಕ್ಷಿ ಕೆ, ಚಿಕ್ಕಲಿಂಗಪ್ಪ, ರಂಗನಾಥ್ ಕೆ ಹಾಗೂ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ