Friday, November 20, 2026

ಪ್ರಾಯೋಗಿಕ ಆವೃತ್ತಿ

ತಳಗವಾದಿಯಲ್ಲಿ ಜಿಲ್ಲಾ ಮಟ್ಟದ ಕಲಿಕಾ ಹಬ್ಬ : ಭರದ ಸಿದ್ಧತೆ

ಮಂಡ್ಯ ಜಿಲ್ಲಾ ಮಟ್ಟದ ಕಲಿಕಾ ಹಬ್ಬವು ಫೆ.15ರಿಂದ 17ರವರೆಗೆ ಮಳವಳ್ಳಿ ತಾಲ್ಲೂಕಿನ ತಳಗವಾದಿ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಟಿ.ಲಕ್ಷ್ಮಿ ತಿಳಿಸಿದರು.

ಮಳವಳ್ಳಿ ತಾಲ್ಲೂಕಿನ ತಳಗವಾದಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್-19 ಸಾಂಕ್ರಾಮಿಕ ರೋಗ ಕಾಣಸಿಕೊಂಡಿದ್ದ ಸಂದರ್ಭದಲ್ಲಿ ಶಾಲೆಗಳು ಮುಚ್ಚಿದ್ದ ಹಿನ್ನೆಲೆಯಲ್ಲಿ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದರು. ಹೀಗಾಗಿ ಕಲಿಕಾ ಚೇತರಿಕೆಗೆ ಅನುಕೂಲವಾಗುವಂತೆ ಕಲಿಕಾ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದರು.

ಹಾಡು-ಪಾಡು, ವೈಜ್ಞಾನಿಕ ಮಾಹಿತಿ ನೀಡುವ ಮಾಡು-ಆಡು, ಸೃಜನಶೀಲತೆ ಬೆಳೆಸುವ ಕಾಗದ-ಕತ್ತರಿ, ಜ್ಞಾನಾಭಿವೃದ್ಧಿಗೆ ಊರು ಸುತ್ತೋಣ ಎಂಬ ನಾಲ್ಕು ಹಂತಗಳಲ್ಲಿ ಕಲಿಕಾ ಹಬ್ಬವನ್ನು ಹಮ್ಮಿಕೊಳ್ಳಲಾಗಿದ್ದು, ಮಕ್ಕಳಲ್ಲಿ ನವಚೈತನ್ಯ ಮೂಡಿಸಲು ಸಹಕಾರಿಯಾಗಿದೆ ಎಂದು ಹೇಳಿದರು.

ಎಸ್‌ಡಿಎಂಸಿ ಅಧ್ಯಕ್ಷ ಟಿ.ಎಂ.ಪ್ರಕಾಶ್ ಮಾತನಾಡಿ, ತಳಗವಾದಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಕಲಿಕಾ ಹಬ್ಬವನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಸುಮಾರು ಒಂದು ವಾರಗಳಿಂದ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೆ ಪೂರ್ವ ಸಿದ್ದತೆಗಳನ್ನು ಮಾಡುತ್ತಿದ್ದಾರೆ. ಶಾಲಾ ಗೋಡೆಗಳ ಮೇಲೆ ಕಲಿಕೆಗೆ ಅನುಕೂಲವಾಗುವ ಚಿತ್ರಪಟಗಳನ್ನು ಬರೆಯಲಾಗಿದೆ. ಶಾಲೆ ಸೇರಿದಂತೆ ಗ್ರಾಮವನ್ನೇ ಮಧುವಣಗಿತ್ತಿಯಂತೆ ಶೃಂಗರಿಸಲಾಗುತ್ತಿದ್ದು, ಫೆ. 15ರಂದು ತಳಗವಾದಿ ಗ್ರಾಮದ ಉಮಾಮಹೇಶ್ವರಿ ದೇವಸ್ಥಾನದಿಂದ ಬೃಹತ್ ಜಾನಪದ ಕಲಾಮೇಳ ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳನ್ನು ಕರೆತರಲಾಗುವುದು ಎಂದರು.

ಕಾರ್ಯಕ್ರಮಕ್ಕೆ ಶಾಸಕ ಡಾ.ಕೆ ಅನ್ನದಾನಿ, ಜಿಲ್ಲಾಧಿಕಾರಿ ಡಾ. ಎಚ್‌.ಎನ್. ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ನಾಗರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್. ಶಾಂತ ಹುಲ್ಮನಿ, ಜಿಲ್ಲಾ ಉಪ ನಿರ್ದೇಶಕ ಎಸ್‌.ಟಿ. ಜವರೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಪಿ.ನಾಗರಾಜು, ಕೆಎಂಎಫ್ ನಿರ್ದೇಶಕ ವಿಶ್ವನಾಥ್ ಸೇರಿದಂತೆ 8 ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇತರೆ ಸೇರಿದಂತೆ ಇತರರು ಭಾಗವಹಿಸಲಿದ್ದಾರೆಂದು ಹೇಳಿದರು.

ಗೋಷ್ಠಿಯಲ್ಲಿ ಉಪ ಯೋಜನಾ ಸಮನ್ವಯಾಧಿಕಾರಿ ರೇಣುಕಮ್ಮ, ತೆಹರಾ, ಗೋಪಾಲಗೌಡ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್, , ಮುಖ್ಯ ಶಿಕ್ಷಕ ಮಹದೇವಸ್ವಾಮಿ, ಸುರೇಶ್, ಮುಖಂಡರಾದ ಬಸವರಾಜು ಸೇರಿದಂತೆ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ