Friday, September 20, 2024

ಪ್ರಾಯೋಗಿಕ ಆವೃತ್ತಿ

ದಲಿತರ ಮೇಲಿನ ದೌರ್ಜನ್ಯ | 4 ವರ್ಷಗಳಲ್ಲಿ 1,89,945 ಪ್ರಕರಣ ದಾಖಲು : NCRB ವರದಿ

“2018ರಿಂದ ನಾಲ್ಕು ವರ್ಷಗಳಲ್ಲಿ 1,89,945 ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ” ಎಂದು 2021ರಲ್ಲಿ ಪ್ರಕಟವಾದ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರು ಬಹುಜನ ಸಮಾಜ ಪಕ್ಷದ ಸಂಸದ ಗಿರೀಶ್ ಚಂದ್ರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ಅಂಕಿಅಂಶಗಳೆಷ್ಟು, ಅಂತಹ ಘಟನೆಗಳ ಮೇಲೆ ನಿಗಾ ಇಡಲು ಯಾವುದೇ ಕ್ರಮ ಜರುಗಿಸಲಾಗಿದೆ ಎಂದು ಗಿರೀಶ್ ಚಂದ್ರ ಕೇಳಿದ್ದರು.

ಕಳೆದ ವರ್ಷದ ಅಂಕಿಅಂಶಗಳನ್ನು ಒದಗಿಸಲು ಮಿಶ್ರಾ ಅವರಿಗೂ ಸಾಧ್ಯವಾಗಿಲ್ಲ. ಅಪರಾಧಗಳ ಅಂಕಿಅಂಶಗಳನ್ನು ಸಂಗ್ರಹಿಸುವ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ಇತ್ತೀಚಿನ ವರದಿಯನ್ನು 2021ರಲ್ಲಿ ಪ್ರಕಟಿಸಲಾಗಿದೆ ಎಂದು ಮಿಶ್ರಾ ಸ್ಪಷ್ಟಪಡಿಸಿದ್ದಾರೆ. ‘ಭಾರತದಲ್ಲಿ ಅಪರಾಧ’ ಎಂಬ ಶೀರ್ಷಿಕೆಯನ್ನು ವರದಿಯನ್ನು ರೂಪಿಸಲಾಗಿದೆ.

ಈ ನಾಲ್ಕು ವರ್ಷಗಳಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣಗಳ ಪೈಕಿ 27,754 ಜನರಿಗೆ ಶಿಕ್ಷೆಯಾಗಿದೆ ಎಂದು ಸಚಿವರು ಲೋಕಸಭೆಯಲ್ಲಿ ಹಂಚಿಕೊಂಡ ಅಂಕಿಅಂಶಗಳು ಬಹಿರಂಗಪಡಿಸಿವೆ.

2018ರಲ್ಲಿ 11,924, 2019ರಲ್ಲಿ 11,829, 2020ರಲ್ಲಿ 12,714 ಮತ್ತು 2021ರಲ್ಲಿ 13,146 ದಲಿತರ ಮೇಲಿನ ಅಪರಾಧ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದು, ಅತಿ ಹೆಚ್ಚು ದೌರ್ಜನ್ಯ ನಡೆಸಿದ ರಾಜ್ಯವಾಗಿ ಉತ್ತರಪ್ರದೇಶವನ್ನು ಗುರುತಿಸಲಾಗಿದೆ.

ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ದಲಿತರ ಮೇಲಿನ ದೌರ್ಜನ್ಯದ ಶೂನ್ಯ ಪ್ರಕರಣಗಳು ವರದಿಯಾಗಿವೆ.

“ಪೊಲೀಸ್ ಮತ್ತು ಸಾರ್ವಜನಿಕ ಸುವ್ಯವಸ್ಥೆಯು ಭಾರತದ ಸಂವಿಧಾನದ ಏಳನೇ ಶೆಡ್ಯೂಲ್ ಅಡಿಯಲ್ಲಿ ರಾಜ್ಯದ ವಿಷಯಗಳಾಗಿವೆ” ಎಂದು ಮಿಶ್ರಾ ತಮ್ಮ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

“ಆಯಾ ರಾಜ್ಯ ಸರ್ಕಾರಗಳು ಅಸ್ತಿತ್ವದಲ್ಲಿನ ಕಾನೂನುಗಳ ನಿಬಂಧನೆಗಳ ಅಡಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ, ಪರಿಶಿಷ್ಟ ಜಾತಿಗಳು ಸೇರಿದಂತೆ ನಾಗರಿಕರ ಜೀವನ, ಆಸ್ತಿಯ ರಕ್ಷಣೆಯನ್ನು ನಿಭಾಯಿಸಿವೆ” ಎಂದಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಗೃಹ ಸಚಿವಾಲಯವು ಕಾಲಕಾಲಕ್ಕೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆಗಳನ್ನು ನೀಡುತ್ತಿದೆ ಎಂದು ಮಿಶ್ರಾ ಹೇಳಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!