Friday, November 20, 2026

ಪ್ರಾಯೋಗಿಕ ಆವೃತ್ತಿ

ರಾಜಕೀಯ ದ್ವೇಷ : ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಸಂಬಂಧ ಜೆಡಿಎಸ್ ಬೆಂಬಲಿತ ಮೂವರ ವಿರುದ್ಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದ್ದೂರು ತಾಲೂಕು ಕುದರಗುಂಡಿ ಕಾಲೋನಿ, ಮಲ್ಲಯ್ಯ ನಗರ ನಿವಾಸಿಗಳಾದ ಗಿರೀಶ, ವಿನಯ್ ಮತ್ತು ಮಲ್ಲಿಕ ಎಂಬ ಜೆಡಿಎಸ್ ಬೆಂಬಲಿತ ಕಾರ್ಯಕರ್ತರು ಇದೇ ಗ್ರಾಮದ ಅಭಿಲಾಷ, ನವೀನ ಎಂಬುವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ.

ಮಂಗಳವಾರ ತಡರಾತ್ರಿ ಏಕಾಏಕಿ ಹಲ್ಲೆಗೆ ಮುಂದಾದ ಆರೋಪಿಗಳು ಗ್ರಾಮದಲ್ಲಿ, ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುತ್ತಿರುವ ನಿಮಗೆ ಮುಂದಿನ ದಿನಗಳಲ್ಲಿ ಬುದ್ಧಿ ಕಲಿಸುವುದಾಗಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ್ದಾರೆ.

ಘಟನೆ ವೇಳೆ ಗಾಯಗೊಂಡ ಅಭಿಲಾಷ ಮತ್ತು ನವೀನ್ ಮದ್ದೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಘಟನೆ ಸಂಬಂಧ ಅಭಿಲಾಷ ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ ಮದ್ದೂರು ಸಿಪಿಐ ಸಂತೋಷ್ ನೇತೃತ್ವದ ತಂಡ ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಮೂವರು ಆರೋಪಿಗಳ ವಿರುದ್ಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ