Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಹಿರಿಯ ವಕೀಲ ಸದಾಶಿವರೆಡ್ಡಿ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ವಕೀಲರ ಪರಿಷತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಸದಾಶಿವರೆಡ್ಡಿ ಅವರ ಕಚೇರಿಗೆ ದುಷ್ಕರ್ಮಿಗಳು ದಾಳಿ ಮಾಡಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ವಕೀಲರ ಸಂಘದ ವತಿಯಿಂದ ವಕೀಲರು ಮಳವಳ್ಳಿ ಪಟ್ಟಣದಲ್ಲಿ ಕೆಂಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.

ಮಳವಳ್ಳಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ಅಧ್ಯಕ್ಷ ಸುಂದರ್ ನೇತೃತ್ವದಲ್ಲಿ ಹೊರಟ ಮೌನ ಮೆರವವಣಿಗೆ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದರು.

ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಡಿ.ಎಂ ಸುಂದರ ಮಾತನಾಡಿ, ರಾಜ್ಯ ವಕೀಲರ ಪರಿಷತ್ತು ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಸದಾಶಿವ ರೆಡ್ಡಿ ರವರ ಕಚೇರಿಗೆ ದುಷ್ಕರ್ಮಿಗಳು ದಾಳಿ ಮಾಡಿ ಹಲ್ಲೆ ನಡೆಸಿರುವ ಕ್ರಮವನ್ನು ನಮ್ಮ ವಕೀಲರ ಸಂಘ ಖಂಡಿಸುತ್ತದೆ. ಈ ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಕೀಲರ ಸಂಘದ ಕಾರ್ಯದರ್ಶಿ ನಟೇಶ್, ವಕೀಲ ಶ್ರೀಕಂಠಸ್ವಾಮಿ ಸೇರಿದಂತೆ ಹಲವರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ