Friday, November 20, 2026

ಪ್ರಾಯೋಗಿಕ ಆವೃತ್ತಿ

ರೇಷ್ಮೆ ಬೆಳೆಗಾರನ ಮೇಲೆ ಹಲ್ಲೆ ಖಂಡಿಸಿ ಬಿಜೆಪಿ ಪ್ರತಿಭಟನೆ

ರೇಷ್ಮೆ ಬೆಳೆಗಾರ ರೈತನ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮಳವಳ್ಳಿ ಪಟ್ಟಣದ ಹೊರವಲಯದಲ್ಲಿರುವ ರೇಷ್ಮೆ ಮಾರುಕಟ್ಟೆ ಬಳಿ ಪ್ರತಿಭಟನೆ ನಡೆಸಿದರು.

ಬಿಜೆಪಿ ರೈತಮೋರ್ಚಾ ಅಧ್ಯಕ್ಷ ದೇವರಾಜು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಅಧಿಕಾರಿ ಹಾಗೂ ರೀಲರ್ ವಿರುದ್ದ ಘೋಷಣೆ ಕೂಗಿದರು.

ಈ ವೇಳೆ ಬಿಜೆಪಿ ಜಿಲ್ಲಾ ಮುಖಂಡ ಹೆಚ್. ಆರ್ ಅಶೋಕಕುಮಾರ್ ಮಾತನಾಡಿ, ಎರಡು ದಿನಗಳ ಹಿಂದೆ ಗುಳಘಟ್ಟ ಗ್ರಾಮದ ರೈತ ರೇಷ್ಮೆ ಮಾರುಕಟ್ಟೆ ಬಂದ ವೇಳೆ ಕಡಿಮೆ ದರಕ್ಕೆ ಬೀಟ್ ಕೂಗಿದ್ದು ರೈತ ರೇಷ್ಮೆಯನ್ನು ಕೊಡಲು ನಿರಾಕರಿಸಿದಾಗ ರೀಲರ್ ಒಬ್ಬರು ದರ್ಪದಿಂದ ರೈತನ ಮೇಲೆ ಹಲ್ಲೆ ನಡೆಸಿದ್ದು, ಅಧಿಕಾರಿಗಳು ಇದುವರೆಗೂ ರೀಲರ್ ಮೇಲೆ ಯಾವುದೇ ಕ್ರಮಕೈಗೊಳ್ಳದೆ ಇರುವುದನ್ನು ಬಿಜೆಪಿ ಖಂಡಿಸುತ್ತದೆ. ಇನ್ನೂ ಎರಡು ದಿನದೊಳಗೆ ರೀಲರ್ ಮೇಲೆ ಕ್ರಮಕೈಗೊಳ್ಳದಿದ್ದರೆ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷ ಕೃಷ್ಣ, ರೈತಮೋರ್ಚಾ ಅಧ್ಯಕ್ಷ ದೇವರಾಜು, ನಾಗೇಗೌಡ ಸೇರಿದಂತೆ ಹಲವರು ಇದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ