Thursday, September 19, 2024

ಪ್ರಾಯೋಗಿಕ ಆವೃತ್ತಿ

ಬ್ಯಾಂಕ್ ದರೋಡೆಗೆ ಯತ್ನ: ಸೆಕ್ಯೂರಿಟಿ ಗಾರ್ಡ್ ಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು

ಬ್ಯಾಂಕ್ ದರೋಡೆ ಬಂದ ಗುಂಪನ್ನು ತಡೆಯಲು ಯತ್ನಿಸಿದ ಸೆಕ್ಯೂರಿಟಿ ಗಾರ್ಡ್ ಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಭಾನುವಾರ ಮಧ್ಯರಾತ್ರಿ ಸುಮಾರು 12 ಗಂಟೆ ಸಮಯದಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ನಡೆದಿದೆ.

ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಮನು(30) ಚಾಕು ಇರಿತದಿಂದ ಗಾಯಗೊಂಡಿರುವ ಕರ್ತವ್ಯನಿರತ ನೌಕರ ಬ್ಯಾಂಕ್ ನೌಕರ ಎಂದು ತಿಳಿದು ಬಂದಿದೆ.

ಘಟನೆ ವಿವರ

ಹರಿಹರಪುರ ಗ್ರಾಮದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಮುಸುಕು ದಾರಿಗಳಾಗಿದ್ದ ಮೂವರು ದರೋಡೆಕೋರರು ನುಗ್ಗಲು ಯತ್ನಿಸಿದ್ದಾರೆ. ಇದೆ ವೇಳೆ ಕರ್ತವ್ಯನಿರತನಾಗಿದ್ದ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಮನು(30) ದರೋಡೆಕೋರರನ್ನು ತಡೆದು, ಕಿರುಚಿಕೊಂಡಿದ್ದಾರೆ. ಇದರಿಂದ ವಿಚಲಿತರಾದ ದರೋಡೆಕೋರರು ಬ್ಯಾಂಕ್ ಬೀಗ ಒಡೆಯಲು ಸಾಧ್ಯವಾಗದೇ ಇದ್ದಾಗ ಸೆಕ್ಯೂರಿಟಿ ಗಾರ್ಡ್ ಮನು ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿ ಸಾರ್ವಜನಿಕರು ಜಮಾಯಿಸುತ್ತಿರುವುದನ್ನು ಅರಿತು ಸ್ಥಳದಿಂದ ಪರಾರಿಯಾದರು.

ಚಾಕು ಇರಿತದಿಂದ ಗಾಯಗೊಂಡು ಅಸ್ವಸ್ಥಗೊಂಡಿದ್ದ ಸೆಕ್ಯುರಿಟಿ ಗಾರ್ಡ್ ಮನು ಅವರನ್ನು ಗ್ರಾಮಸ್ಥರು ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿರುವ ಸೆಕ್ಯೂರಿಟಿ ಗಾರ್ಡ್ ಮನು ಅವರನ್ನು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಕೆ.ಅಶೋಕ್‌, ಹರಿಹರಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ಹರೀಶ್, ಸಿಇಓ ಕಾಂತರಾಜು, ಮಾಜಿ ಅಧ್ಯಕ್ಷರಾದ ನಿಂಗರಾಜು, ಕೃಷ್ಣೇಗೌಡ, ಬಾಲಗಂಗಾಧರತಿಲಕ್, ರೇವಣ್ಣ, ಡೇರಿ ಅಧ್ಯಕ್ಷ ನಾಗೇಶ್ ಮತ್ತಿತರರು ಗಾಯಾಳುವನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಕೆ.ಆರ್.ಪೇಟೆ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿ, ದುಷ್ಕರ್ಮಿಗಳನ್ನು ಪತ್ತೆ ಮಾಡಿ, ಡಿಸಿಸಿ ಬ್ಯಾಂಕ್ ಮತ್ತು ವಿ.ಎಸ್.ಎಸ್.ಎನ್ ಬ್ಯಾಂಕ್ ಶಾಖೆಗಳಿಗೆ ಸೂಕ್ತ ಪೊಲೀಸ್ ಗಸ್ತು ಭದ್ರತೆ ಒದಗಿಸಿಕೊಡಬೇಕು ಎಂದು ಮನವಿ‌ ಮಾಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!