Friday, November 20, 2026

ಪ್ರಾಯೋಗಿಕ ಆವೃತ್ತಿ

ಆಗಸ್ಟ್ 16 ರಿಂದ ಕಾರ್ಮಿಕರ ಅನಿರ್ದಿಷ್ಟಾವಧಿ ಪ್ರತಿಭಟನೆ

ಜಿಲ್ಲೆಯಲ್ಲಿ ಪಡಿತರ ಅನ್ನಭಾಗ್ಯ ಯೋಜನೆಯಡಿ ಕೆಲಸ ಮಾಡುತ್ತಿರುವ
ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಆ.15ರೊಳಗೆ ಈಡೇರಿಸದಿದ್ದರೆ ಕರ್ನಾಟಕ ರಾಜ್ಯ ಲೋಡಿಂಗ್ ಮತ್ತು ಅನ್ ಲೋಡಿಂಗ್ ಕಾರ್ಮಿಕರ ಒಕ್ಕೂಟದಿಂದ ಆ.16 ರಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದು ಕರ್ನಾಟಕ ಶ್ರಮಿಕ ಶಕ್ತಿ ಹಾಗೂ ಲೋಡಿಂಗ್ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವರದರಾಜೇಂದ್ರ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,ಕಳೆದ ಹತ್ತು ವರ್ಷಗಳಿಂದ ನಿಗಮದ ಕೆ.ಎಫ್.ಸಿ.ಎಸ್.ಸಿ ಮತ್ತು ಟಿ.ಎ.ಪಿ.ಸಿ.ಎಂ.ಎಸ್. ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತ್ತುವಳಿ ಲೋಡಿಂಗ್ ಮತ್ತು ಅನ್ ಲೋಡಿಂಗ್ ಕೆಲಸ ಮಾಡುವ ಹಮಾಲಿ ಕಾರ್ಮಿಕರು ಕೆಲಸ ನಿರ್ವಹಿಸಿಕೊಂಡು ಬರುತ್ತಿದ್ದಾರೆ ಎಂದರು.

ಒಕ್ಕೂಟದಿಂದ ನಿರಂತರ ಹೋರಾಟದ ಕಾರಣಕ್ಕಾಗಿ ಇಎಸ್ ಐ ಮತ್ತು ಪಿಎಫ್ ಸೇರಿದಂತೆ ಹಲವು ಕಾರ್ಮಿಕ ಕಾನೂನುಗಳನ್ನು ಜಾರಿಗೆ ಬಂದಿವೆ. ಈ ಕಾನೂನುಗಳನ್ನು ಜಾರಿ ಮಾಡಲು ಮೀನಮೇಷ ಎಣಿಸುತ್ತಿರುವುದನ್ನು ವಿರೋಧಿಸಿ ಧರಣಿ ಆರಂಭಿಸಲಾಗಿದೆ ಎಂದರು.

ಹಮಾಲಿ ಕಾರ್ಮಿಕರು ಹಾಗೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರ ಬೇಡಿಕೆ ಈಡೇರಿಸುವಂತೆ ಕೋರ್ಟ್ ಆದೇಶಿಸಿದೆ. ಜತೆಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿ ತೀರ್ಮಾನ ತೆಗೆದುಕೊಂಡಿದ್ದರೂ ಸಹ ಕಾನೂನು ಜಾರಿ ಮಾಡಿಲ್ಲ. ಗ್ರಾಮಾಂತರ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರು ಕಾರ್ಮಿಕರಿಗೆ ಕಟ್ಟಬೇಕಾದ ಇಎಸ್‌ಐ ಮತ್ತು ಪಿಎಫ್ ಪಾವತಿ ಬಾಕಿ ಹಣ ಪಾವತಿ ಮಾಡಿಲ್ಲ. ಅನಿರ್ದಿಷ್ಟಾವಧಿ ಹೋರಾಟಕ್ಕೆ ಎಡೆಮಾಡಿಕೊಡದೆ ತಕ್ಷಣವೇ ನಮ್ಮ ಬೇಡಿಕೆಗಳನ್ನು ಆಗಸ್ಟ್ 15ರೊಳಗೆ ಈಡೇರಿಸದಿದ್ದರೆ, ಪ್ರಗತಿಪರರು ಹಾಗೂ ಶ್ರಮಿಕ ಸಂಘಟನೆಗಳ ಬೆಂಬಲದೊಂದಿಗೆ ಆಗಸ್ಟ್ 16 ರಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಪೂರ್ಣಿಮಾ,ಶ್ರಮಿಕ ನಿವಾಸಿಗಳ ಒಕ್ಕೂಟದ ಅಧ್ಯಕ್ಷ ಪ್ರಕಾಶ್, ಲೋಡಿಂಗ್ ಕಾರ್ಮಿಕರ ಒಕ್ಕೂಟದ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ಪುಟ್ಟಸ್ವಾಮಿ, ಮಹದೇವು, ಎಚ್.ಮುತ್ತಯ್ಯ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ