ಫೋಟೋಗೆ ಪೋಸ್ ನೀಡಲು ಹೋದಾಗ 36 ವರ್ಷದ ವ್ಯಕ್ತಿಯೊಬ್ಬರು ನೀರು ಪಾಲಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಶ್ರೀರಂಗಪಟ್ಟಣದ ಸರ್ವ ಧರ್ಮ ಆಶ್ರಮದ ಬಳಿಯ ಕೃಷ್ಣರಾಜಸಾಗರ (ಕೆಆರ್‌ಎಸ್) ಪ್ರದೇಶದ ಬಳಿ ಸ್ನೇಹಿತರೊಂದಿಗೆ ಪಿಕ್ನಿಕ್‌ಗೆ ಬಂದಿದ್ದ ಆಟೋ ಚಾಲಕ ಮೈಸೂರಿನ ಮಹೇಶ್ ಎಂದು ಗುರುತಿಸಲಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಫೋಟೋಗೆ ಪೋಸ್ ನೀಡುತ್ತಿದ್ದಾಗ ಮಹೇಶ್ ಕಾಲುಜಾರಿ ನದಿಗೆ ಬಿದ್ದಿದ್ದಾರೆ. ನೀರಿನ ಮಟ್ಟ ಹೆಚ್ಚಾಗಿದ್ದು, ರಬಸ ಜೋರಾಗಿರುವುದರಿಂದ ಅವರು ವೇಗವಾಗಿ ಕೊಚ್ಚಿಕೊಂಡು ಹೋಗಿದ್ದಾರೆ.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸೇರಿದಂತೆ ರಕ್ಷಣಾ ತಂಡಗಳು ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿವೆ. ಘಟನೆಯನ್ನು ಕೆಆರ್‌ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಿಸಲಾಗಿದೆ.
ಕೃಪೆ : ನಾನು ಗೌರಿ.ಕಾಂ




