2024-25 ನೇ ಸಾಲಿನ ಎಸ್.ಎಸ್.ಎಲ್.ಸಿ- ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಇದೇ ಜೂ.10ರಂದು ಬೆಳಿಗ್ಗೆ 10 ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಮಂಡ್ಯನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ರವಿಕುಮಾರ್ ಗಣಿಗ ತಿಳಿಸಿದ್ದಾರೆ.
ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತರನ್ನು ಗುರುತಿಸಿ ಪುರಸ್ಕಾರ ನೀಡುವುದು ನಮ್ಮ ಕರ್ತವ್ಯವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪೋಷಕರು ಆಗಮಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




