Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಶಾಲಾ ವಿದ್ಯಾರ್ಥಿಗಳಿಂದ ಡೆಂಗ್ಯೂ ಕುರಿತು ಜಾಗೃತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ (ದಕ್ಷಿಣ ವಲಯ) ಮಂಡ್ಯ ಭಾರತ ಸೇವಾದಳ ಜಿಲ್ಲಾ ಸಮಿತಿ ಹಾಗೂ ಮಂಡ್ಯ ತಾಲ್ಲೂಕಿನ ಬೇಲೂರು ಸರ್ಕಾರಿ ಪ್ರೌಢಶಾಲೆ ಇವರ ಸಂಯುಕ್ತ ಆಶಯದಲ್ಲಿ ಸೋಮವಾರ ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು.

ಭಾರತ ಸೇವಾದಳ ಜಿಲ್ಲಾ ಸಂಘಟಕ ಸಿ ಎಸ್ ಗಣೇಶ ಹಾಗೂ ಹಿರಿಯ ಶಿಕ್ಷಕಿ ರೇಣುಕಾ ಅವರು ಡೆಂಗ್ಯೂ ಜ್ವರದ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ನೀಡಿ ನೀಡಿದರು.

ನಂತರ ಬೇಲೂರಿನ ಪ್ರಮುಖ ಬೀದಿಗಳಲ್ಲಿ ಡೆಂಗ್ಯೂ ಜ್ವರದ ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಲಾಯಿತು. ಡೆಂಗ್ಯೂ ಜ್ವರದ ಬಗ್ಗೆ ಊರಿನ ಜನರಲ್ಲಿ ಜಾಗೃತಿ ಮೂಡಿಸಿ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಜ್ಯೋತಿ, ಚಂದ್ರಕಲಾ, ಶಿಕ್ಷಕ ದೀಪಕ್ ಯಶವಂತ ಹಾಜರಿದ್ದರು.ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಉಷಾರಾಣಿ ಕಾರ್ಯಕ್ರಮ ಆಯೋಜಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!