ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ 2021-22ನೇ ಸಾಲಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ (ಕಳೆದ ವರ್ಷ) ಸಿಇಟಿ ಮೂಲಕ ಆಯ್ಕೆಯಾಗಿ ಈಗಾಗಲೇ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮಾತ್ರ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ,ಕಡ್ಡಾಯವಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮವನ್ ಹಾಗೂ ತಾಲೂಕು ಕೇಂದ್ರಗಳಲ್ಲಿ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ನವೆಂಬರ್ 15ರೊಳಗೆ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ದೂ.ಸಂ. 0823-22318 04 ಅಥವಾ ವೆಬ್ ಸೈಟ್ http://www.dbcdc.karnataka.




