Thursday, November 19, 2026

ಪ್ರಾಯೋಗಿಕ ಆವೃತ್ತಿ

ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆ

ಬಿಜೆಪಿ ವತಿಯಿಂದ ರಾಜ್ಯ ಮಟ್ಟದ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಅ.1ರಂದು ಮಂಡ್ಯ ನಗರದ ವಿಠಲ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಬಿ.ರಮೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾವೇಶದಲ್ಲಿ ಜಿಲ್ಲಾದ್ಯಂತ ಸುಮಾರು 500 ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದ ಅವರು,  ಬಿಜೆಪಿಯು ಗುಲ್ಬರ್ಗದಲ್ಲಿ ಮುಂದಿನ ಅಕ್ಟೋಬರ್ 30 ರಂದು  ಹಿಂದುಳಿದ ವರ್ಗಗಳ ಜಾಗೃತಿ ರಾಜ್ಯ ಮಟ್ಟದ ಸಮಾವೇಶದ ಪೂರ್ವಭಾವಿ ಆಯೋಜಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ, ರೇಷ್ಮೆ ಸಚಿವ ಕೆ.ಸಿ ನಾರಾಯಣ ಗೌಡ, ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಪ್ಪಾಲ್ ಸುವರ್ಣ, ಉಪಾಧ್ಯಕ್ಷ  ಅಶೋಕಮೂರ್ತಿ ಭಾಗವಹಿಸುವರು ಎಂದು ಹೇಳಿದರು.

ಶಾಸಕ ಕುಮಾರ ಬಂಗಾರಪ್ಪ, ವಿಧಾನ ಪರಿಷತ್‌ ಸದಸ್ಯ ಕೆ.ಪಿ.ನಂಜುಂಡಿ, ನಿಗಮ ಮಂಡಳಿ ಅಧ್ಯಕ್ಷ ಗಿರೀಶ್‌ ಉಪ್ಪಾರ್‌, ನಿಗಮ ಮಂಡಳಿ ಅಧ್ಯಕ್ಷ  ಶಿವಕುಮಾರ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸಿ.ಪಿ. ಉಮೇಶ್‌ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ನಗರಾಧ್ಯಕ್ಷ ಆನಂದ್, ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ಉಪಾಧ್ಯಕ್ಷೆ ಭಾರತಿ ನಾರಾಯಣ್, ನವೀನ್ ಹಾಗೂ ಶಿವಣ್ಣ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ