Friday, September 20, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ| ನಗುವನಹಳ್ಳಿಯಲ್ಲಿ ಜಾಗೃತಿ ಕಾರ್ಯಕ್ರಮ

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಭ್ರೂಣ ಹತ್ಯೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ ಹೇಳಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿ ಗ್ರಾಮದ ರಾಮಮಂದಿರ ಬೀದಿಯಲ್ಲಿ ಸಾರ್ವಜನಿಕರಿಗಾಗಿ ಹಮ್ಮಿಕೊಂಡಿದ್ದ “ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ತಡೆ ಕಾಯ್ದೆ ಕುರಿತು” ಜಾಗೃತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಗಂಡು ಮತ್ತು ಹೆಣ್ಣು ನಾಣ್ಯದ ಎರಡು ಮುಖಗಳು ಇದನ್ನರಿತು ಎಲ್ಲರೂ ಅಸಮತೋಲನ ಉಂಟಾಗದಂತೆ ನೋಡಿಕೊಳ್ಳಬೇಕು ಹೆಣ್ಣು ಭ್ರೂಣ ಹತ್ಯೆಯಿಂದ ಸಮಾಜದ ಮೇಲೆ ಪರಿಣಾಮ ಬೀರುತ್ತದೆ ಲಿಂಗ ಅನುಪಾತದಲ್ಲಿ ಎರುಪೇರಾಗಿ ಸಮಾಜದಲ್ಲಿ ಸಾಕಷ್ಟು ಸಮಸ್ಯೆಗಳು ಉಂಟಾಗುತ್ತವೆ ಮಹಿಳೆಯರ ಮೇಲೆ ಅತ್ಯಾಚಾರ ಹೆಚ್ಚಾಗುತ್ತವೆ, ಪುರುಷ ಮಹಿಳೆಯರ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರವು ಹೆರಿಗೆಗೆ ಮುನ್ನ ಭ್ರೂಣ ಲಿಂಗ ಪತ್ತೆ ಮಾಡುವ ತಂತ್ರ ದುರ್ಬಳಕೆ ಮತ್ತು ತಡೆ ಕಾಯಿದೆ ಜಾರಿಗೆ ತಂದಿದೆ ಇದನ್ನು ಉಲ್ಲಂಘಿಸಿದಲ್ಲಿ ದಂಡ ಹಾಗೂ ಶಿಕ್ಷೆ ವಿಧಿಸಲಾಗುತ್ತಿದೆ ಆದ್ದರಿಂದ ಭ್ರೂಣ ಹತ್ಯೆ ತಡೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕೆಂದು ಸಲಹೆ ನೀಡಿದರು.

ವಿವಿಧ ಜಾಗೃತಿ ಸಂದೇಶ ಫಲಕಗಳ ಮೂಲಕ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳ ತಾಯಂದಿರು, ಗರ್ಭಿಣಿಯರು ಹಾಗೂ ಆಶಾ ಕಾರ್ಯಕರ್ತೆ ಸುಮಾ, ನೇತ್ರ ಇತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!