Monday, November 23, 2026

ಪ್ರಾಯೋಗಿಕ ಆವೃತ್ತಿ

ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ ವಿದ್ಯಾರ್ಥಿನಿಯರಿಗೆ 30,000 ರೂ. ಸ್ಕಾಲರ್ ಶಿಫ್ : ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಸಂಪೂರ್ಣ ಮಾಹಿತಿ

ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ(Azim Premji Foundation) ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯರಿಗೆ ಉನ್ನತದ ಶಿಕ್ಷಣವನ್ನು ಪಡೆಯಲು ಉತೇಜನವನ್ನು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

2025-2026 ನೇ ಸಾಲಿನ ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್(Azim Premji Foundation scholarship) ವಿದ್ಯಾರ್ಥಿವೇತನದ ಅಡಿಯಲ್ಲಿ ಪದವಿ ಪೂರ್ವ ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ ಪಡೆದಿರುವ ಆಸಕ್ತ ಅರ್ಹ ವಿದ್ಯಾರ್ಥಿಗಳು ₹30,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.

ಎಷ್ಟು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ?

ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾಗುವ ಎಲ್ಲಾ ವಿದ್ಯಾರ್ಥಿನಿಯರಿಗೆ ಒಂದು ವರ್ಷಕ್ಕೆ ₹30,000 ರೂ ವರೆಗೆ ವಿದ್ಯಾರ್ಥಿವೇತನವನು ಒದಗಿಸಲಾಗುತ್ತದೆ.

  • ಆಯ್ಕೆಯಾದ ಅಭ್ಯರ್ಥಿಗಳು ವಾರ್ಷಿಕ ₹30,000 ವಿದ್ಯಾರ್ಥಿವೇತನವನ್ನು ಪಡೆಯುತ್ತಾರೆ.
  • ಆನ್ ಲೈನ್ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಭಾರತ ದೇಶದ ಖಾಯಂ ನಿವಾಸಿಯಾಗಿರಬೇಕು.
  • ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರಬೇಕು
  • 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಮತ್ತು ಡಿಪ್ಲೋಮಾ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್ 2025
    • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
      ಅರ್ಹ ವಿದ್ಯಾರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಅರ್ಜಿಯನ್ನು ಸಲ್ಲಿಸಬಹುದು.

    ಹಂತ-1: ವಿದ್ಯಾರ್ಥಿಗಳು ಮೊದಲಿಗೆ “Azim Premji Scholarship Application“ ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿಬೇಕು.

    ಹಂತ-2: ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿದ ನಂತರ ಇಲ್ಲಿ ಬಲಬದಿಯಲ್ಲಿ ಕಾಣುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ ಖಾತೆಯನ್ನು ರಚನೆ ಮಾಡಿಕೊಂಡು ಲಾಗಿನ್ ಅಗಿ.

    ಹಂತ-3: ಲಾಗಿನ್ ಅದ ಬಳಿಕ ಇಲ್ಲಿ ಅವಶ್ಯವಿರುವ ಎಲ್ಲಾ ದಾಖಲೆ ಮತ್ತು ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣುವ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

    ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:

    • ಆಧಾರ್ ಕಾರ್ಡ್/Aadhar.
    • ಬ್ಯಾಂಕ್ ಪಾಸ್ ಬುಕ್/Bank Pass Book.
    • ವಿದ್ಯಾರ್ಥಿಯ ಪೋಟೋ/Photo.
    • ವಿದ್ಯಾರ್ಥಿಯ ಶಾಲಾ ವ್ಯಾಸಂಗ ಪ್ರಮಾಣ ಪತ್ರ/Study Certificate.
    • ಪೋಷಕರ ಆದಾಯ ಪ್ರಮಾಣ ಪತ್ರ/Income Certificate.


    Online Application Link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್-Apply Now

    Azim Premji Foundation Website-ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್–Click Here

    ಕೃಪೆ : ಕೃಷಿಕ ಮಿತ್ರ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ