Thursday, September 19, 2024

ಪ್ರಾಯೋಗಿಕ ಆವೃತ್ತಿ

ಚಂದ್ರಶೇಖರನ್ ಆತ್ಮಹತ್ಯೆ: ಸಚಿವ ಬಿ.ನಾಗೇಂದ್ರ ತಲೆದಂಡ ನಿಶ್ಚಿತ !

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಹಿನ್ನಲೆಯಲ್ಲಿ,ಸಿದ್ದರಾಮಯ್ಯ ಸರ್ಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ತಲೆದಂಡ ನಿಶ್ಚಿತವಾಗಿದೆ.

ಚಂದ್ರಶೇಖರನ್ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿ ವಿಪಕ್ಷ ಬಿಜೆಪಿಯು ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೂ ಆಗ್ರಹಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಳ್ಳಾರಿ ಉಸ್ತುವಾರಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರ, ಈ ಪ್ರಕರಣದಲ್ಲಿ ನನ್ನ ಪಾತ್ಪ ಇಲ್ಲ, ಹಾಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು,ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ತಿಳಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯಿಂದ ಬಲವಂತವಾಗಿ 89 ಕೋಟಿಗಳಷ್ಟು ಹಣವನ್ನು ಆಕ್ರಮವಾಗಿ ವರ್ಗಾವಣೆ ಮಾಡಿಸಲಾಗಿದೆ ಎಂದು ಮನನೊಂದ ಚಂದ್ರಶೇಖರನ್ ಶಿವಮೊಗ್ಗದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರು ಸಾವಿಗಿಂತ ಮುಂಚೆ ಡೆತ್ ನೋಟ್ ಬರೆದಿಟ್ಟಿದ್ದು, ಇದು ಆಡಳಿತರೂಢ ಸರ್ಕಾರಕ್ಕೆ ತಲೆ ಬಿಸಿಯಾಗುವಂತೆ ಮಾಡಿದೆ.

ಕಳೆದ ಬಿಜೆಪಿ ಸರ್ಕಾರದಲ್ಲಿ ಬೆಳಗಾವಿಯ ಸಂತೋಷ್ ಎಂಬ ಗುತ್ತಿಗೆದಾರರೊಬ್ಬರ ಆಗ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು.ಸಂತೋಷ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೋರಾಟ ರೂಪಿಸಿತ್ತು.ಅದರಂತೆ ಆಗ ಸಚಿವರಾಗಿದ್ದ ಈಶ್ವರಪ್ಪ ರಾಜೀನಾಮೆ ನೀಡಿದ್ದರು.

ಹಾಗಾಗಿ ಈ ಬಾರಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯುವುದು ಬಹುತೇಕ ಖಚಿತ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!