ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಕೆಪಿಸಿಸಿ ಅಧ್ಯಕ್ಷ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಬಿ.ಫಾರಂ ವಿತರಿಸಿದರು.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಈ ಬಾರಿಯೂ ಅತ್ಯಧಿಕ ಮತಗಳಿಂದ ಗೆದ್ದು ಬನ್ನಿ ಎಂದು ಡಿ.ಕೆ.ಶಿವಕುಮಾರ್ ಅವರು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡರಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ,ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.




