Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಫೆಬ್ರವರಿ 2 ರಂದು ಮಹಿಳೆ ಮತ್ತು ಆಕೆಯ 17 ವರ್ಷದ ಮಗಳು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(81)ರ ಸಹಾಯ ಪಡೆಯಲು ತೆರಳಿದಾಗ ಲೈಂಗಿಕ ದೌರ್ಜನ್ಯದ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸದಾಶಿವನಗರ ಪೊಲೀಸರು ಗುರುವಾರ (ಮಾರ್ಚ್ 14) ತಡರಾತ್ರಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ,ರ  ಮೇಲೆ 17 ವರ್ಷದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ತಾಯಿಯು ನೀಡಿದ ದೂರಿನ ಮೇರೆಗೆ 2012 ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಸೆಕ್ಷನ್ ಅಡಿಯಲ್ಲಿ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 8 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.

ಸಂತ್ರಸ್ತೆಯ ಜೊತೆಗಿದ್ದ ತಾಯಿ ಗುರುವಾರ ಸಂಜೆ ಪೊಲೀಸರಿಗೆ ದೂರು ನೀಡಿದ್ದು, ಮಧ್ಯರಾತ್ರಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಫೆಬ್ರವರಿ 2, 2024 ರಂದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯ ಸಹಾಯವನ್ನು ಪಡೆಯಲು ತಾಯಿ ಮತ್ತು ಮಗಳು ಹೋಗಿದ್ದಾಗ ಲೈಂಗಿಕ ದೌರ್ಜನ್ಯದ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!