Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿಗೆ ಗುಡ್ ಬೈ ಹೇಳಿದ ಬಿ.ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ

ಮಳವಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸತ್ತ ಮಾಜಿ ಸಚಿವ ಬಿ.ಸೋಮಶೇಖರ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಬಿ.ಸೋಮಶೇಖರ್ ಕಾಂಗ್ರೆಸ್ ಸೇರಿದರು.

ಈ ಸಂದರ್ಭದಲ್ಲಿ ಮಳವಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ಎಂ.ನರೇಂದ್ರಸ್ವಾಮಿ ಅವರು ಬಿ.ಸೋಮಶೇಖರ್ ಅವರಿಗೆ ಕಾಂಗ್ರೆಸ್ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!