Thursday, September 19, 2024

ಪ್ರಾಯೋಗಿಕ ಆವೃತ್ತಿ

ಬೇಬಿ ಗ್ರಾ.ಪಂ.ಅಧ್ಯಕ್ಷರ ಆಯ್ಕೆ

ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ಬೇಬಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರಾಮು ಅವರು ಇಂದು ಆಯ್ಕೆಯಾದರು.

12 ಮಂದಿ ಸದಸ್ಯ ಬಲವುಳ್ಳ ಗ್ರಾಮ ಪಂಚಾಯಿತಿಯಲ್ಲಿ, ಹಿಂದಿನ ಅಧ್ಯಕ್ಷ ಸಿದ್ದೇಶ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು, ಅಧ್ಯಕ್ಷ ಸ್ಥಾನಕ್ಕೆ ರಾಮು ಹಾಗೂ ಪವಿತ್ರ ಅವರು ನಾಮಪತ್ರ ಸಲ್ಲಿಸಿದರು.

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರಾಮು ಅವರಿಗೆ 8 ಮತಗಳು, ಪವಿತ್ರ ಅವರಿಗೆ 4 ಮತಗಳು ಚಲಾವಣೆಯಾದವು. 8 ಮತಗಳನ್ನು ಪಡೆದ ರಾಮು ಅವರು ಬೇಬಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದರು ಎಂದು ಚುನಾವಣಾ ಅಧಿಕಾರಿ ತಿಳಿಸಿದರು.

ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ರಾಮು ಅವರನ್ನು ಜೆಡಿಎಸ್ ತಾಲೂಕು ಅಧ್ಯಕ್ಷ ಎಂ.ಜಿ. ತಿಮ್ಮೇಗೌಡ,ಎಪಿಎಂಸಿ ಮಾಜಿ ಸದಸ್ಯ ಕೆಂಚನಹಳ್ಳಿ ಪುಟ್ಟಸ್ವಾಮಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು ಅಭಿನಂದಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!