Thursday, September 19, 2024

ಪ್ರಾಯೋಗಿಕ ಆವೃತ್ತಿ

ಕುರಿ ಕಾಯುತ್ತಿದ್ದ ಹುಡುಗನನ್ನು ಮತ್ತೇ ಶಾಲೆಗೆ ದಾಖಲಿಸಿದ ಸಿಎಂ ಸಿದ್ದರಾಮಯ್ಯ !

ಬಡತನದ ಕಾರಣದಿಂದಾಗಿ ಶಾಲೆಯನ್ನು ಬಿಟ್ಟು ಕುರಿ ಕಾಯಲು ಹೋಗುತ್ತಿದ್ದ ಹುಡುಗನನ್ನು ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಮತ್ತೇ ಶಾಲೆಗೆ ದಾಖಲಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಬಸಾಪುರದ ಯೋಗೇಶ್‌ ಎಂಬ ಬಾಲಕನನ್ನು ಆತನ ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ, ಕಳೆದ 2 ವರ್ಷದಿಂದ ಕುರಿ ಮೇಯಿಸಲು ತೊಡಗಿಸಿದ್ದರು. ಈ ವಿಚಾರವು ಸ್ಥಳೀಯರೊಬ್ಬರಿಂದ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಬಾಲಕನ ಮನೆಗೆ ಕಳುಹಿಸಿದ್ದರು.

“>

ಸಿಎಂ ಕಚೇರಿಯ ಅಧಿಕಾರಿಗಳು ಬಸಾಪುರಕ್ಕೆ ಭೇಟಿ ನೀಡಿ, ಬಾಲಕನ ತಂದೆ ತಾಯಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಿ, ಕೇವಲ 24 ಗಂಟೆಗಳ ಒಳಗೆ ಬಾಲಕನನ್ನು ಶಾಲೆಗೆ ಸೇರ್ಪಡೆ ಮಾಡಿಸಿದರು. 

ಬಡತನದ ಕಾರಣಕ್ಕೆ ಶಿಕ್ಷಣದಿಂದ ವಂಚಿತನಾಗಿದ್ದ ಯೋಗೇಶ್‌ ಈಗ ಇತರ ಮಕ್ಕಳಂತೆ ಶಾಲೆಯಲ್ಲಿ ಕಲಿಯುತ್ತಾ, ನಲಿಯುತ್ತಾ ಉಜ್ವಲ ಭವಿಷ್ಯದೆಡೆಗೆ ಹೆಜ್ಜೆ ಹಾಕುತ್ತಿದ್ದಾನೆ. ಬಾಲ್ಯದಲ್ಲಿ ನಾನು ಕೂಡ ಯೋಗೇಶ್‌ ನಂತೆ ಶಾಲೆಯಿಂದ ವಂಚಿತನಾಗಿದ್ದೆ, ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ 5ನೇ ತರಗತಿಗೆ ದಾಖಲಾತಿ ಮಾಡಿ ಶಿಕ್ಷಣ ಸಿಗುವಂತೆ ಮಾಡಿದ್ದರಿಂದ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತಮ್ಮ ಬಾಲ್ಯವನ್ನು ಮೆಲಕು ಹಾಕಿದ್ದಾರೆ.

ಮರಳಿ ಶಿಕ್ಷಣದತ್ತ ಮುಖಮಾಡಿರುವ ಈ ಬಾಲಕನ ಭವಿಷ್ಯವೂ ಉಜ್ವಲವಾಗಲಿ ಎಂಬ ಹಾರೈಕೆ ನನ್ನದು. ಇಂತಹ ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳು ನಿಮಗೂ ಕಂಡು ಬಂದರೆ ನಮ್ಮ ಕಚೇರಿಯ @osd_cmkarnataka ಟ್ವಿಟರ್ ಖಾತೆಯನ್ನು ಸಂಪರ್ಕಿಸಿ ಎಂದು ಅವರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!