Thursday, June 13, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಬೆಂಬಲ: ಬದರಿ ನಾರಾಯಣ್

ಮಂಡ್ಯ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ (ಸ್ಟಾರ್ ಚಂದ್ರು) ಅವರನ್ನು ಬೆಂಬಲಿಸುವುದಕ್ಕಾಗಿ ಮಂಡ್ಯ ಜಿಲ್ಲಾ ಜೆಡಿಎಸ್ ಹಿಂದುಳಿದ ವರ್ಗಗಳ ಘಟಕದ ಮಾಜಿ ಅಧ್ಯಕ್ಷ ಹೆಚ್.ಬಿ ಬದರಿ ನಾರಾಯಣ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ಜನತಾದಳದ ಸಂಘಟನೆಯಲ್ಲಿ ತೊಡಗಿದ್ದು ,ಪ್ರಸ್ತುತ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗದ ಕಾರಣ, ಜಿಲ್ಲೆಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಮಾಜಿ ಶಾಸಕ ಎಚ್. ಬಿ.ರಾಮು ಅವರ ನೇತೃತ್ವದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದಿರುವ ಬಡವರ ಪರ ಗ್ಯಾರಂಟಿ ಯೋಜನೆಗಳು ಜನತೆಗೆ ಸಹಕಾರಿಯಾಗಿವೆ. ಇದರಿಂದಾಗಿ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವೆಂಕಟರಮಣಗೌಡ ಅವರನ್ನು ಬೆಂಬಲಿಸುವುದಾಗಿ ತಿಳಿಸಿದರು.

ಗೋಷ್ಠಿಯಲ್ಲಿ ವಕೀಲ ಮಹೇಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!