Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಶಾಸಕರಿಂದ ವಿದ್ಯಾರ್ಥಿಗಳಿಗೆ ಬ್ಯಾಗ್ – ನೋಟ್ ಬುಕ್ ವಿತರಣೆ

ಮಂಡ್ಯ ನಗರದ ಷುಗರ್ ಟೌನ್ ನ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್, ನೋಟ್ ಬುಕ್ ಹಾಗೂ ಜಾಮಿಟ್ರಿ ಬಾಕ್ಸ್ ಗಳನ್ನು ಶಾಸಕ ಗಣಿಗ ರವಿಕುಮಾರ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರವಿಕುಮಾರ್ ಅವರು,ಮಕ್ಕಳು ಬಹಳ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ನಮ್ಮ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಿದೆ.ಮಕ್ಕಳು ಇದರ ಸದುಪಯೋಗ ಪಡೆದು ಉತ್ತಮ ಶಿಕ್ಷಣ ಪಡೆದು ಉತ್ತಮ ಸಾಧನೆ ಮಾಡಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ನಯೀಮ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರುದ್ರಪ್ಪ,ನಗರಸಭೆ ಮಾಜಿ ಸದಸ್ಯ ಶಂಕರೇಗೌಡ,ಕಾಂಗ್ರೆಸ್ ಮುಖಂಡರಾದ ಶಿವನಂಜು,ನಾಗರತ್ನ ಸೇರಿದಂತೆ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ