Friday, May 17, 2024

ಪ್ರಾಯೋಗಿಕ ಆವೃತ್ತಿ

ಉಡುಪಿ| ಒಂದೇ ಕುಟುಂಬದ ನಾಲ್ವರ ಕಗ್ಗೊಲೆ: ಆರೋಪಿ‌ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ತಿರಸ್ಕಾರ

ದೇಶಾದ್ಯಂತ ಸುದ್ದಿಯಾಗಿದ್ದ ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಅರುಣ್ ಚೌಗುಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಇಂದು(ಡಿ.30) ತಿರಸ್ಕರಿಸಿದೆ.

ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಆದೇಶ ನೀಡಿದೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್‌ ಚೌಗುಲೆ ಜಾಮೀನು ಕೋರಿ ಡಿ.14ರಂದು ಅರ್ಜಿಯನ್ನು ವಕೀಲ ಕೆ.ಎಸ್‌.ಎನ್‌.ರಾಜೇಶ್ ಮೂಲಕ ಸಲ್ಲಿಸಿದ್ದನು. ಇದಕ್ಕೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು.

ಈ ಕುರಿತು ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ, ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದರು.

ಕೃಪೆ:ಈದಿನ.ಕಾಂ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!