Sunday, March 3, 2024

ಪ್ರಾಯೋಗಿಕ ಆವೃತ್ತಿ

ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದಿದ್ದ ತಹಶೀಲ್ದಾರ್ ಜಾಮೀನು ಅರ್ಜಿ ತಿರಸ್ಕೃತ

ಕಳೆದ ಜೂನ್ 22ರಂದು ಗ್ರಾಮ ಆಡಳಿತಾಧಿಕಾರಿ (ವಿಎ)ಯಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪಾಂಡವಪುರ ತಹಶೀಲ್ದಾರ್ ಕೆ.ಸಿ.ಸೌಮ್ಯ ಹಾಗೂ ಆರ್’ಐ ಮಾದೇಶ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ಶ್ರೀರಂಗಪಟ್ಟಣ 3ನೇ ಅಪರ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಗೋಪಾಲಕೃಷ್ಣ ಅವರು ಸೋಮವಾರ ಮಧ್ಯಾಹ್ನ ವಿಚಾರಣೆ ನಡೆಸಿದರು. ತನ್ನ ಅಧೀನ‌‌ ಸಿಬ್ಬಂದಿಯಿಂದಲೇ 40 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇಬ್ಬರು‌ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದ್ದು ನ್ಯಾಯಾಂಗ ಬಂಧನ ಮುಂದುವರೆದಿದೆ. ಲೋಕಾಯುಕ್ತ ಪರವಾಗಿ ವಕೀಲ ಟಿ.ಎಸ್.ಸತ್ಯಾನಂದ ವಾದ ಮಂಡಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!