Friday, November 20, 2026

ಪ್ರಾಯೋಗಿಕ ಆವೃತ್ತಿ

ಯಡಿಯೂರಪ್ಪಗೆ ವಿರುದ್ದದ ಪೋಕ್ಸೋ ಪ್ರಕರಣ ರದ್ದತಿಗೆ ನಕಾರ ; ನಿರೀಕ್ಷಣಾ ಜಾಮೀನು

2024ರ ಜೂನ್ ತಿಂಗಳಲ್ಲಿ 12 ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಮೊಕದ್ದಮೆಯನ್ನು  ರದ್ದುಪಡಿಸಲಿ ನಿರಾಕರಿಸಿರುವ ನ್ಯಾಯಾಲಯವು, ನಿರೀಕ್ಷಣಾ ಜಾಮೀನು ನೀಡಿ ಆದೇಶ ಮಾಡಿದೆ.

ಈ ಪ್ರಕರಣದ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿತ್ತು. ಇದರ ನಡುವೆಯೇ ಯಡಿಯೂರಪ್ಪನವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಜೊತೆಗೆ, ಪ್ರಕರಣದ ರದ್ದು ಕೋರಿ ಅದಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು.

ಇವುಗಳನ್ನು ಜಾಮೀನು ಅರ್ಜಿಯನ್ನು ಮಾತ್ರ ಪುರಸ್ಕರಿಸಿರುವ ನ್ಯಾ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಯಡಿಯೂರಪ್ಪನವರಿಗೆ ಜಾಮೀನು ನೀಡಿದೆ. ಆದರೆ, ಪ್ರಕರಣ ರದ್ದತಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿಲ್ಲ. ಅಲ್ಲದೆ, ಈ ಪ್ರಕರಣದಲ್ಲಿ ಯಡಿಯೂರಪ್ಪನವರ ಬಂಧನಕ್ಕೆ ಆದೇಶಿಸಿದ್ದ ಟ್ರಯಲ್ ಕೋರ್ಟ್ ನ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಜೊತೆಗೆ, ಈ ಮೊದಲು ವಿಚಾರಣೆಯಲ್ಲಿದ್ದ ಕೆಳ ನ್ಯಾಯಾಲಯಕ್ಕೆ ವರ್ಗಾಯಿಸಿದೆ.

ಏನಿದು ಪ್ರಕರಣ

ಮಾಜಿ ಸಿಎಂ ಯಡಿಯೂರಪ್ಪ ಅವರು ತಮ್ಮ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅದರ ಆಧಾರದಲ್ಲಿ ಮಾ.14ರಂದು ಸದಾಶಿವಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರು ನಗರದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.

ಟ್ರಯಲ್ ಕೋರ್ಟ್ ಗೆ 750 ಪುಟಗಳ ತನಿಖಾ ವರದಿಯನ್ನು ಸಲ್ಲಿಸಿದ್ದ ಸಿಐಡಿ, ಯಡಿಯೂರಪ್ಪ ಹಾಗೂ ಅವರ ನಾಲ್ವರು ಆಪ್ತರ ವಿರುದ್ಧ ಈ ಪ್ರಕರಣದಲ್ಲಿ ಸಾಕ್ಷ್ಯ ನಾಶ ಮಾಡಿದ ಆರೋಪವನ್ನೂ ಮಾಡಿತ್ತು. ಆ ವರದಿಯನ್ನು ಆಧರಿಸಿ ಟ್ರಯಲ್ ಕೋರ್ಟ್ ಯಡಿಯೂರಪ್ಪನವರ ಬಂಧನಕ್ಕೆ ಆದೇಶಿಸಿತ್ತು. ಆ ಹಿನ್ನೆಲೆಯಲ್ಲಿ ತಮ್ಮ ಬಂಧನಕ್ಕೆ ತಡೆ ಕೋರಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. 2024ರ ಜೂ. 14ರಂದು ಅವರ ಬಂಧನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ