Saturday, November 21, 2026

ಪ್ರಾಯೋಗಿಕ ಆವೃತ್ತಿ

ಬಾಲ್ ಬ್ಯಾಡ್ಮಿಂಟನ್ : ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ರೀರಕ್ಷಾ

ಕೆ.ಆರ್.ಪೇಟೆ ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದ ಗ್ರಾಮೀಣ ಪ್ರತಿಭೆ ಶ್ರೀರಕ್ಷಾ.ಎ.ಡಿ. ಅವರು ಕಳೆದ ವಾರ ಚೆನ್ನೈ ನಲ್ಲಿ ನಡೆದ ಅಂತಾರಾಜ್ಯ ತಾಂತ್ರಿಕ ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಚಾಂಪಿಯನ್ ಶಿಫ್ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈಕೆಯು ಮಂಡ್ಯದ ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ವಿಭಾಗದಲ್ಲಿ 6ನೇ ಸೆಮಿಸ್ಟರ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಮಂಡ್ಯ ಜಿಲ್ಲೆಯಿಂದ ತಮಿಳುನಾಡಿನ ಚೆನ್ನೈನಲ್ಲಿ ನಡೆದ ವಿವಿಧ ರಾಜ್ಯಗಳ ಸ್ಪರ್ಧಿಗಳೊಂದಿಗೆ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಭಾಗವಹಿಸಿ ಚಾಂಪಿಯನ್ ಶಿಫ್ ಪಡೆದುಕೊಳ್ಳುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈಕೆಯು ಕೆ.ಆರ್.ಪೇಟೆ ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದ ಶಿಕ್ಷಕರಾದ ಎ.ಜೆ.ಧನೇಂದ್ರೇಗೌಡ ಮತ್ತು ಶೋಭಾ ದಂಪತಿಗಳ ಸುಪುತ್ರಿಯಾಗಿದ್ದಾರೆ. ಗ್ರಾಮೀಣ ಪ್ರತಿಭೆ ಶ್ರೀರಕ್ಷಾ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಉತ್ತಮ ಸಾಧನೆ ಮಾಡಿರುವ ಈಕೆಯನ್ನು ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣಗೌಡ, ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಅಗ್ರಹಾರಬಾಚಹಳ್ಳಿ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ