Wednesday, May 15, 2024

ಪ್ರಾಯೋಗಿಕ ಆವೃತ್ತಿ

ಬೆಂಗಳೂರು-ಮೈಸೂರು ಹೆದ್ಧಾರಿಗೆ ನಾಲ್ವಡಿ ಹೆಸರಿಡಿ : ತಗ್ಗಹಳ್ಳಿ ವೆಂಕಟೇಶ್

ನೂತನವಾಗಿ ನಿರ್ಮಾಣಗೊಂಡಿರುವ ರಾಷ್ಟ್ರೀಯ ಹೆದ್ದಾರಿ 275ರ ಬೆಂಗಳೂರು-ಮೈಸೂರು ಹೆದ್ದಾರಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಒತ್ತಾಯಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ ಆರ್ ಎಸ್ ಜಲಾಶಯ, ಮೈಷುಗರ್, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಮೈಸೂರು ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ನಾಲ್ವಡಿ ಅವರ ಹೆಸರನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನಾಮಕರಣ ಮಾಡಬೇಕು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಲ್ವಡಿ ಅವರ ಹೆಸರನ್ನು ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿದ ಅವರು, ಈಗಾಗಲೇ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರು ನಾಲ್ವಡಿ ಅವರ ಹೆಸರನ್ನೇ ಪ್ರಸ್ತಾಪಿಸಿದ್ದು, ಇದನ್ನು ನಾವು ಸ್ವಾಗತಿಸುತ್ತೇವೆ ಎಂದರು.

ಪತ್ರ ಚಳವಳಿ  

ಹೆದ್ದಾರಿ ನಾಲ್ವಡಿ ಹೆಸರು ನಾಮಕರಣಕ್ಕೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಂಘ-ಸಂಸ್ಥೆಗಳ ಜೊತೆಗೂಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಚಳವಳಿ ಮೂಲಕ ಒತ್ತಾಯಿಸುವ ಅಭಿಯಾನ ಆರಂಭಿಸುವುದಾಗಿ ಹೇಳಿದ ಅವರು, ಜಿಲ್ಲೆಯಾದ್ಯಂತ ಈ ಅಭಿಯಾನ ಹಮ್ಮಿಕೊಳ್ಳುವುದಾಗಿ ಹೇಳಿದರು.

ವಿಧಾನಸೌಧದ ಮುಂದೆ ಪ್ರತಿಮೆ ಸ್ಥಾಪನೆ ಆಗ್ರಹ

ನಾಲ್ವಡಿ ಅವರ ಪ್ರತಿಮೆಯನ್ನು ವಿಧಾನಸೌಧದ ಆವರಣ ಹಾಗೂ ಮಂಡ್ಯನಗರದ ಕೇಂದ್ರ ಸ್ಥಾನದಲ್ಲಿ ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ಹೋರಾಟ ಪ್ರಾರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗೋಷ್ಠಿಯಲ್ಲಿ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಲಂಕೇಶ್ ಮಂಗಲ, ಉಪಾಧ್ಯಕ್ಷ ಜಗದೀಶ್, ಪದಾಧಿಕಾರಿಗಳಾದ ಲೋಕೇಶ್, ರಾಜು, ಮಂಜುಳ, ಸಚಿನ್ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!