Thursday, September 19, 2024

ಪ್ರಾಯೋಗಿಕ ಆವೃತ್ತಿ

ಬೆಂಗಳೂರು-ಮೈಸೂರು ಹೆದ್ದಾರಿ ಲೋಪದೋಷ ಸರಿಪಡಿಸಲು ಖಡಕ್ ಸೂಚನೆ ನೀಡಿದ ಸಂಸದೆ ಸುಮಲತಾ

ಮೈಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-27ರ ಲೋಪದೋಷಗಳನ್ನು ಹೆದ್ದಾರಿಯ ಲೋಕಾರ್ಪಣೆಗೆ ಮುನ್ನ ಸರಿಪಡಿಸುವಂತೆ ಮಂಡ್ಯ ಸಂಸದೆ ಸುಮಲತಾ ಯೋಜನಾ ನಿರ್ದೇಶಕ ಶ್ರೀಧರ್ ಅವರಿಗೆ ಖಡಕ್ ಸೂಚನೆ ನೀಡಿದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜೈರಾಮ್ ರಾಯಪುರ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಾಂತ ಹುಲ್ಮನಿ ಹಾಗೂ ಹೆದ್ದಾರಿಯ ಯೋಜನಾ ನಿರ್ದೇಶಕ ಶ್ರೀಧರ್ ಸೇರಿದಂತೆ ಇನ್ನಿತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಮಂಗಳವಾರ (ಜ.24) ಸಭೆ ನಡೆಸಿ, ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ (Road white Topping, ಫುಟ್ ಪಾತ್ ಅಭಿವೃದ್ಧಿ ಮತ್ತು ರಿಂಗ್ ರಸ್ತೆ ನಿರ್ಮಾಣ) ಕುರಿತು ಹಲವು ಸೂಚನೆಗಳನ್ನು ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಗೋಪಾಲಯ್ಯ ಅವರು ಮೈಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಪರಿವೀಕ್ಷಣೆ ನಡೆಸಿದ ಸಂದರ್ಭದಲ್ಲಿ ಕಂಡುಬಂದ ಹಲವು ಲೋಪ ದೋಷಗಳನ್ನು ರಸ್ತೆಯ ಉದ್ಘಾಟನೆಗೆ ಮುಂಚೆಯೇ ಸರಿಪಡಿಸಿ, ಉಳಿಕೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!