Friday, November 20, 2026

ಪ್ರಾಯೋಗಿಕ ಆವೃತ್ತಿ

ಬೆಂಗಳೂರು- ಮೈಸೂರು ಹೆದ್ದಾರಿ| ಆಗಸ್ಟ್1ರಿಂದ ಬೈಕ್, ಆಟೋ, ಟ್ರ್ಯಾಕ್ಟರ್ ಸಂಚಾರಕ್ಕೆ ನಿಷೇಧ

ವಿವಾದಗಳಿಂದ ಸುದ್ದಿಯಾಗುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ (ರಾಷ್ಟ್ರೀಯ ಹೆದ್ದಾರಿ-75)ನಲ್ಲಿ ಸಂಚಾರ ಮಾಡುವವರಿಗೆ ವಿಶೇಷ ಸೈಚನೆಯೊಂದು ಹೊರಬಂದಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ಹೆದ್ದಾರಿಯಲ್ಲಿ ಬೈಕ್, ಆಟೊ, ಟ್ರ್ಯಾಕ್ಟರ್, ಕೃಷಿ ವಾಹನಗಳು ಸೇರಿದಂತೆ ವಿವಿಧ ಬಗೆಯ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿದೆ.

ಜಾಹೀರಾತು

ಜುಲೈ 12ರಂದು ಈ ಕುರಿತು ಗೆಜೆಟ್‌ ಅಧಿಸೂಚನೆ ಹೊರಡಿಸಿದ್ದು, ಮೋಟಾರು ವಾಹನ ಕಾಯ್ದೆಯ ಅನ್ವಯ ಪ್ರಾಧಿಕಾರವು ಈ ಕ್ರಮಕ್ಕೆ ಮುಂದಾಗಿದೆ. ಹೊಸ ಆದೇಶವು ಆಗಸ್ಟ್ 1ರಿಂದ ಜಾರಿಗೆ ಬರಲಿದೆ.

ಎಕ್ಸ್‌ಪ್ರೆಸ್ ವೇ ಆರಂಭವಾದಾಗಲೇ ಬೈಕ್, ಆಟೊ ಹಾಗೂ ಕೃಷಿಗೆ ಬಳಸುವ ವಾಹನಗಳ ಸಂಚಾರವನ್ನು ನಿಷೇಧಿಸಬೇಕು ಎಂಬು ಮಾತುಗಳು ಕೇಳಿ ಬಂದಿತ್ತು. ಆಗ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ಆ ನಂತರ ವಿಷಯ ತಣ್ಣಗಾಗಿತ್ತು. ಪ್ರಾಧಿಕಾರ ಪ್ರಸ್ತಾವ ಸಿದ್ಧಪಡಿಸಿ ಕೇಂದ್ರ ಭೂ ಸಾರಿಗೆ ಸಚಿವಾಲಯಕ್ಕೆ ಕಳಿಸಿ ಕೊಟ್ಟಿತ್ತು.

ಈ ಹೆದ್ದಾರಿಯಲ್ಲಿ ಸಂಚಾರ ಆರಂಭವಾದಾಗಿನಿಂದ ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಲೇ ಇವೆ. ಹಾಗಾಗಿ ಈ ಪ್ರಸ್ತಾವದ ಕುರಿತ ಚರ್ಚೆ ಮುನ್ನೆಲೆಗೆ ಬಂದಿತ್ತು. ಉನ್ನತ ಮಟ್ಟದ ಅಧಿಕಾರಿಗಳ ಹಂತದಲ್ಲಿ ಪರಿಶೀಲನೆ ನಡೆದಿತ್ತು. ಇದೀಗ ಅಧಿಕಾರಿಗಳು ಪ್ರಸ್ತಾವಕ್ಕೆ ಹಸಿರು ನಿಶಾನೆ ತೋರಿದ್ದು, ಗೆಜೆಟ್‌ ಅಧಿಸೂಚನೆಯೂ ಆಗಿದೆ. ಇತ್ತೀಚೆಗಷ್ಟೇ ಪ್ರಾಧಿಕಾರದ ತಜ್ಞರ ಸಮಿತಿ ಎಕ್ಸ್‌ಪ್ರೆಸ್ ವೇಗೆ ಭೇಟಿ ನೀಡಿ, ಸುರಕ್ಷತೆ ಮತ್ತು ಅಪಘಾತ ತಡೆ ಕ್ರಮಗಳ ಕುರಿತು ಪರಿಶೀಲನೆ ನಡೆಸಿತ್ತು. ಹೊಸ ಆದೇಶವನ್ನು ಆಗಸ್ಟ್ 1ರಿಂದ ಜಾರಿ ಮಾಡಲಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ