Thursday, September 19, 2024

ಪ್ರಾಯೋಗಿಕ ಆವೃತ್ತಿ

ಬೆಂಗಳೂರು ವಿವಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾಲಯವು ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೂರ್ಣ ಹಾಗೂ ಅರೆಕಾಲಿಕ ಉಪನ್ಯಾಸಕ ಹುದ್ದೆಗಳ ನೇಮಕಾತಿಗೆ 2022ರ ಸೆಪ್ಟೆಂಬರ್ 12ರಿಂದ ಆಫ್ ಲೈನ್ ನಲ್ಲಿ ಅರ್ಜಿಯನ್ನು ಆಹ್ವಾನಿಸಿದೆ.

ಸಿವಿಲ್ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ಇನ್ನೂ ಮುಂತಾದ ಹುದ್ದೆಗಳ ಭರ್ತಿಗಾಗಿ ಪ್ರಸಕ್ತ ಸಾಲಿಗೆ ನೇಮಕಾತಿ ಮಾಡಲಾಗುತ್ತಿದೆ ಇದು ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿರುತ್ತದೆ.

ಬೆಂಗಳೂರು ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯಲಿದೆ. ಬೆಂಗಳೂರು ವಿಶ್ವವಿದ್ಯಾಲಯ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ವಯಸ್ಸಿನ ಮಿತಿಯನ್ನು ನಿಗಧಿಗೊಳಿಸಿದೆ.

ಅರ್ಜಿಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ https://bangaloreuniversity.ac.in/ ನಲ್ಲಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಲು 2022 ಸೆಪ್ಟೆಂಬರ್ 26 ಕೊನೆಯ ದಿನಾಂಕವಾಗಿರುತ್ತದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!