Friday, September 20, 2024

ಪ್ರಾಯೋಗಿಕ ಆವೃತ್ತಿ

ಶಿಕ್ಷಣ ಸಂಸ್ಥೆಗಳ ಸಮೀಪ ಗಾಂಜಾ ಮಾರಾಟ- ಸೇವನೆ ತಡೆಗಟ್ಟಿ: ದಿನೇಶ್ ಗೂಳಿಗೌಡ

ರಾಜ್ಯದಾದ್ಯಂತ ಶಿಕ್ಷಣ ಸಂಸ್ಥೆಗಳ ಸಮೀಪ ಗಾಂಜಾ ಮಾರಾಟ- ಸೇವನೆ ತಡೆಗಟ್ಟಿ, ಜಿಲ್ಲಾ ಮಟ್ಟದಲ್ಲಿ ವಿಶೇಷ ದಳವನ್ನು ರಚಿಸಬೇಕೆಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ಧಾರೆ.

ಈ ವಿಚಾರದಲ್ಲಿ ಸಾರ್ವಜನಿಕರ ಸಹಕಾರ ಪಡೆಯಲು ಸಹಾಯವಾಣಿಯನ್ನು ಆರಂಭಿಸಬೇಕು, ಜನರು ಮುಕ್ತವಾಗಿ ಮಾಹಿತಿ ನೀಡುವಂತಾಗಲು ಹೆಸರು ಮತ್ತು ವಿಳಾಸವನ್ನು ಗೌಪ್ಯವಾಗಿ ಇಡುವುದಾಗಿ ಮನವರಿಕೆ ಮಾಡಬೇಕು. ಶಾಲಾ, ಕಾಲೇಜು, ಶಿಕ್ಷಣ ಸಂಸ್ಥೆಗಳ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಿಶೇಷ ಗಸ್ತು ವ್ಯವಸ್ಥೆ ಮಾಡಬೇಕೆಂದು ಅವರು ಕೋರಿದ್ದಾರೆ.

ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಇಂಥ ಜಾಲದ ಬಗ್ಗೆ ಗಮನಕ್ಕೆ ಬಂದರೆ ಶಾಲಾ ಮುಖ್ಯಸ್ಥರು, ಇಲ್ಲವೇ ಪೋಷಕರ ಗಮನಕ್ಕೆ ತರುವಂತೆ ಮನವರಿಕೆ ಮಾಡಬೇಕು, ಕೂಡಲೇ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ದಿಟ್ಟ ಹೆಜ್ಜೆಯನ್ನಿಡಬೇಕೆಂದು ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!