Sunday, November 22, 2026

ಪ್ರಾಯೋಗಿಕ ಆವೃತ್ತಿ

ಬಾನು ಮುಷ್ತಾಕ್ ಅವರಿಂದ ಮೈಸೂರು ದಸರಾ ಉದ್ಘಾಟನೆ ; ಸಿಎಂ ಸಿದ್ದರಾಮಯ್ಯ

ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್  ಅವರು ಉದ್ಘಾಟಿಸಲಿದ್ದು, ಮೈಸೂರು ಜಿಲ್ಲಾಡಳಿತದ ವತಿಯಿಂದ  ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಈ ಮಾಹಿತಿ ನೀಡಿದ ಅವರು, ಬಾನು ಮುಷ್ತಾಕ್ ಅವರ ಕೃತಿ ʼಎದೆಯ ಹಣತೆʼಗೆ ಬುಕರ್ ಪ್ರಶಸ್ತಿ  ದೊರೆತಿದ್ದು,  ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನೆಲೆಯುಳ್ಳ ಬಾನು ಮುಷ್ತಾಕ್, ಪ್ರಗತಿಪರ ಚಿಂತಕರೂ ಆಗಿದ್ದಾರೆ . ಈ ಬಾರಿ ಶಾಸ್ತ್ರದ ಪ್ರಕಾರ ಹನ್ನೊಂದು ದಿನ ದಸರಾ ನಡೆಯಲಿದೆ. ಅಕ್ಟೋಬರ್ 2 ರಂದು ವಿಜಯದಶಮಿ ಎಂದರು.

ಮೈಸೂರು ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ದೊರೆತಿದ್ದು,  ಕೇಂದ್ರ  ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ದಸರಾ ವೀಕ್ಷಣೆಗೆ ಆಗಮಿಸಬೇಕೆಂದು  ಪತ್ರ ಬರೆದಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ