Sunday, November 22, 2026

ಪ್ರಾಯೋಗಿಕ ಆವೃತ್ತಿ

‘ಬಸವಭವನ’ ನಿರ್ಮಾಣಕ್ಕೆ ಸಂಕಲ್ಪ : ಶಾಸಕರಿಗೆ ಅಭಿನಂದನೆ

ಮಂಡ್ಯ ಜಿಲ್ಲೆಯ ಮಣ್ಣಿನ ಮಗನೆಂದೇ ಬಿಂಬಿಸಿಕೊಂಡಿದ್ದ ಮಾಜಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಲಾಗದೆ ಕೈಚೆಲ್ಲಿದ್ದ `ಬಸವಭವನ’ ನಿರ್ಮಾಣದ ಯೋಜನೆಗೆ ಸಂಕಲ್ಪತೊಟ್ಟಿರುವ ಶಾಸಕ ಪಿ.ರವಿಕುಮಾರ್‌ಗೌಡ ಅವರ ಜನಪರ ಕಾಳಜಿ ಶ್ಲಾಘನೀಯ ಎಂದು ವೀರಶೈವ ಲಿಂಗಾಯತ ವೇದಿಕೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಸುಂಡಹಳ್ಳಿ ಸೋಮಶೇಖರ್ ಹೇಳಿದರು.

ನಗರಸಭೆಯ ಶಾಸಕರ ಕಚೇರಿಯಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ವಿವಿಧ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಬಸವಭವನ ನಿರ್ಮಾಣಕ್ಕೆ ಮುಂದಾಗಿರುವ ಶಾಸಕರ ಅಭಿನಂದನಾ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ನೂರಾರು ಬಾರಿ ಮನವಿ ಮಾಡಿದ್ದರೂ ಜಿಲ್ಲೆಯಲ್ಲಿ ತಮ್ಮ ಹೆಸರು ಉಳಿಸುವಂತಹ ಯಾವುದೇ ಜನೋಪಯೋಗಿ ಕೆಲಸವನ್ನು ಯಡಿಯೂರಪ್ಪ ಅವರು ಮಾಡದೆ ಸಮುದಾಯದ ಭರವಸೆಯನ್ನು ಹುಸಿಮಾಡಿದ್ದರು. ಇದೀಗ ಜಿಲ್ಲಾ ಕೇಂದ್ರವಾದ ಮಂಡ್ಯನಗರದಲ್ಲಿ 1 ಕೋಟಿ ರೂ. ಆರಂಭಿಕ ಅನುದಾನದೊಂದಿಗೆ ಬಸವಭವನ ನಿರ್ಮಾಣ ಮಾಡಲು ಮುಂದಾಗಿರುವ ಶಾಸಕ ಪಿ.ರವಿಕುಮಾರ್‌ಗೌಡ ಅವರ ಬಸವಪ್ರಜ್ಞೆ ಎಲ್ಲಾ ಜನಪ್ರತಿನಿಧಿಗಳಿಗೂ ಅನುಕರಣೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ಪಿ.ರವಿಕುಮಾರ್‌ಗೌಡ, ಜಗಜ್ಯೋತಿ ಬಸವಣ್ಣನವರ ತತ್ವ ಸಿದ್ಧಾಂತಗಳು ಒಂದು ಜಾತಿ ಧರ್ಮಕ್ಕೆ ಸೀಮಿತವಾಗಿಲ್ಲ. ಅಣ್ಣನವರ ಹೆಸರಿನ ಭವನವೂ ವಿಶಾಲವಾಗಿರಬೇಕೆಂಬ ಆಲೋಚನೆಯೂ ತಮ್ಮದಾಗಿದ್ದು ಎಲ್ಲರೊಡನೆ ಚರ್ಚಿಸಿ ನಿರ್ಧಾರಿಸಲಾಗುವುದು ಎಂದರು.

ಜಾಗತಿಕ ಲಿಂಗಾಯತ ಮಹಾಸಭಾ ಕಾರ್ಯಾಧ್ಯಕ್ಷ ಎಂ.ಎಸ್.ಮಂಜುನಾಥ್ ಬೆಟ್ಟಹಳ್ಳಿ, ಜೆಎಲ್‌ಎಂ ಅಧ್ಯಕ್ಷ ಎಂ.ಶಿವಕುಮಾರ್, ಪ್ರಧಾನಕಾರ್ಯದರ್ಶಿ ಶಿವರುದ್ರಪ್ಪ, ಜಿಲ್ಲಾನಿರ್ದೇಶಕರಾದ ಮೆಣಸಗೆರೆ ಶಿವಲಿಂಗಪ್ಪ, ತೇಜಸ್ ಅಂತನಹಳ್ಳಿ, ವೀರಶೈವ ವಿದ್ಯಾರ್ಥಿನಿಲಯ ಟ್ರಸ್ಟಿ ಮಲ್ಲಿಕಾರ್ಜುನಯ್ಯ, ರುದ್ರಪ್ಪ, ಕನ್ನಟ್ಟಿ ನಾಗರಾಜು, ನಾಗಮಂಗಲ ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ