Thursday, April 18, 2024

ಪ್ರಾಯೋಗಿಕ ಆವೃತ್ತಿ

ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆನಂದ್ ತೆಲ್ತುಂಬ್ಡೆ- ಮಹದೇವಪ್ಪ ಆಯ್ಕೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆನಂದ್ ತೆಲ್ತುಂಬ್ಡೆ ಹಾಗೂ ಡಾ. ಎನ್.ಜಿ.ಮಹದೇವಪ್ಪ ಆಯ್ಕೆಯಾಗಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳ ಘೋಷಣೆಯಾಗಿದ್ದು, 2022–23ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆನಂದ್ ತೆಲ್ತುಂಬ್ಡೆ ಹಾಗೂ 2023–24ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಡಾ. ಎನ್.ಜಿ.ಮಹದೇವಪ್ಪ ಅವರು ಆಯ್ಕೆಯಾಗಿದ್ದಾರೆ.

“ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಗೆ ಧಾರವಾಡದ ಜಿನದತ್ತ ದೇಸಾಯಿ ಹಾಗೂ ಗುಜರಾತ್‌ನ ಗಾಂಧೀ ಸೇವಾಶ್ರಮ ಆಯ್ಕೆಯಾಗಿದೆ. ಬಸವ, ಮಹಾವೀರ, ಚೌಡಯ್ಯ ಹಾಗೂ ಪಂಪ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳ ಪ್ರದಾನ ಜ. 31ರಂದು ನಡೆಯಲಿದೆ” ಎಂದು ಸಚಿವ ಶಿವರಾಜ ತಂಗಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಾಯನಯೋಗಿ ಪಂ. ಪಂಚಾಕ್ಷರಿ ಗವಾಯಿ ಪ್ರಶಸ್ತಿಗೆ ಹಿಂದೂಸ್ಥಾನಿ ಗಾಯಕ ಧಾರವಾಡದ ಪಂ. ಸೋಮನಾಥ ಮರಡೂರ, ಟಿ.ಚೌಡಯ್ಯ ಪ್ರಶಸ್ತಿಗೆ ಕೊಳಲು ವಾದಕ ನಿತ್ಯಾನಂದ ಹಳದಿಪುರ, ಕೋಲಾರದ ನಾದಸ್ವರ ಕಲಾವಿದ ಶ್ರೀರಾಮುಲು, ಹಾಗೂ ಕರ್ನಾಟಕಿ ಸಂಗೀತದ ಮೈಸೂರಿನ ಡಾ. ನಾಗಮಣಿ ಶ್ರೀನಾಥ್ ಭಾಜನರಾಗಿದ್ದಾರೆ.

ಈ ಪ್ರಶಸ್ತಿಗಳ ಆಯ್ಕೆಗೆ ರಚಿಸಲಾದ ಸಮಿತಿಗೆ ಡಾ. ಗೊ.ರು.ಚನ್ನಬಸಪ್ಪ ಅಧ್ಯಕ್ಷರಾಗಿದ್ದರು. ಈ ಪ್ರಶಸ್ತಿಗಳು ತಲಾ ₹10 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಕೃಪೆ: ಈದಿನ.ಕಾಂ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!