Wednesday, September 11, 2024

ಪ್ರಾಯೋಗಿಕ ಆವೃತ್ತಿ

ಬಸವಣ್ಣನ ಪುತ್ಥಳಿ ಸ್ಥಾಪನೆಗೆ ಒತ್ತಾಯ

ಮಂಡ್ಯದ ಕಾವೇರಿ ಉದ್ಯಾನವನದಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿ ಸ್ಥಾಪನೆ ಹಾಗೂ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಳವಡಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಸುಬ್ರಹ್ಮಣ್ಯ ಒತ್ತಾಯಿಸಿದರು.

12ನೇ ಶತಮಾನದಲ್ಲೇ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರಬುನಾದಿ ಹಾಕಿ ಜಾತಿ, ಧರ್ಮ, ಅಸಮಾನತೆಯ ವಿರುದ್ಧ ಹೋರಾಡಿ ಸಮಸಮಾಜ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಬಸವಣ್ಣನವರ ಅಶ್ವರೂಢ ಪುತ್ಥಳಿಯನ್ನು ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ವನದಲ್ಲಿ ಪ್ರತಿಷ್ಠಾಪನೆ ಮಾಡಲು ಸರ್ಕಾರ ಅನುಮತಿ ನೀಡಬೇಕು ಎಂದರು.

ಜಿಲ್ಲೆಯ ಜನತೆ ಬಹುದಿನಗಳ ಬೇಡಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಂಭೀರವಾಗಿ ಪರಿಗಣಿಸಬೇಕು. ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸಬೇಕೆಂದು ಆದೇಶ ಇದ್ದರೂ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿಲ್ಲ. ಕೂಡಲೇ ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಾಳೆ ಮೇ 3ರಂದು ಜಿಲ್ಲಾಡಳಿತ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಮೆರವಣಿಗೆ ಹೊರಟು ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಿರುವ ಬಸವೇಶ್ವರರ ಜಯಂತ್ಯೋತ್ಸವದಲ್ಲಿ ಸೇರ್ಪಡೆ ಆಗಲಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ವಕೀಲ ಗುರುಪ್ರಸಾದ್, ಮಹಾಸಭಾದ ಉಪಾಧ್ಯಕ್ಷ ಎಂ.ಎಸ್.ಮಂಜುನಾಥ್, ಜಯಶಂಕರ, ಪ್ರವೀಣ್, ಪ್ರಫುಲ್ಲಚಂದ್ರ ಹಾಜರಿದ್ದರು.

ಇದನ್ನು ಓದಿ:ರಂಜಾನ್ ಪ್ರಯುಕ್ತ ಈದ್ ಕಿಟ್ ವಿತರಿಸಿದ ಪಿಎಫ್ಐ ಸಂಘಟನೆ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!