Friday, November 20, 2026

ಪ್ರಾಯೋಗಿಕ ಆವೃತ್ತಿ

ಬಸವಣ್ಣನವರ ವಚನಗಳು ಇಂದಿಗೂ ಪಸ್ತುತ : ಡಾ.ಶಿವಕುಮಾರ್ ದಂಡಿನ

ಸಾಮಾಜಿಕ,ಆರ್ಥಿಕ, ಶೈಕ್ಷಣಿಕ, ಆಧ್ಯಾತ್ಮಿಕವಾಗಿ ವಿಶ್ವದಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ ಬರೆದ ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿದೆ ಎಂದು ಮಡಿಕೇರಿ, ಕೊಡುಗು ಸಿಐಡಿ, ಅರಣ್ಯಘಟಕ ಪೊಲೀಸ್ ಅಧೀಕ್ಷಕ ಡಾ.ಆರ್ ಶಿವಕುಮಾರ್ ದಂಡಿನ ತಿಳಿಸಿದರು.

ಮಳವಳ್ಳಿ ಪಟ್ಟಣದ ಗಾಯಿತ್ರಿ ಮಂದಿರದಲ್ಲಿ ಶ್ರೀ ವಿಶ್ವಗುರು ಕೋ-ಆಪರೇಟಿವ್ ಸೊಸೈಟಿ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರು ಹಾಕಿಕೊಟ್ಟ ಅಡಿಪಾಯದಿಂದಲೇ ವಿಶ್ವದಲ್ಲಿ ಹಲವಾರು ಕ್ರಾಂತಿಗಳು ಸೃಷ್ಠಿಯಾಗಿದ್ದು,ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ವಚನಗಳು ಅವಶ್ಯಕವಾಗಿದೆ‌. 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಎಲ್ಲಾ ಸಮುದಾಯಕ್ಕೆ ಸಮಾನತೆಯನ್ನು ಕಲ್ಪಿಸಿದ ಬಸವಣ್ಣನವರು ವಚನಗಳ ಮೂಲಕ ಸಮಾಜದಲ್ಲಿದ್ದ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಶ್ರಮಿಸಿದ್ದಾರೆ.ಈ ಕಾರಣಕ್ಕಾಗಿಯೇ ಬಸವಣ್ಣನವರನ್ನು ಜಗದ ಜ್ಯೋತಿ ಎಂದು ಕರೆಯಲಾಗಿದೆ ಎಂದರು.

ಬಸವಣ್ಣನವರು ನಮ್ಮ ದೇಶಕ್ಕೆ ಮಾತ್ರವಲ್ಲದೇ ವಿಶ್ವಕ್ಕೇ ಪೂಜ್ಯರಾಗಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ಹಲವು ಮಹಾನೀಯರು ಎಲ್ಲಾ ಕಾಲಕ್ಕೂ ನಮ್ಮ ಜೊತೆಯಲ್ಲಿ ಜೀವಂತವಾಗಿರುತ್ತಾರೆ.ಅವರ ಸಂದೇಶಗಳನ್ನು ಓದಿಕೊಂದು ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವಚನಕಾರರು ನೆಲಮೂಲ ಸಂಸ್ಕೃತಿಯಿಂದ ಬಂದವರಾಗಿದ್ದಾರೆ. ಶ್ರಮಿಕರು, ಕೂಲಿಕಾರರನ್ನು

ಲಿಂಗಬೇಧವಿಲ್ಲದೇ ನೋಡುವುದು ವಚನ ಸಾಹಿತ್ಯದಲ್ಲಿ ಮಾತ್ರ, ವಚನಗಳು ದಿನನಿತ್ಯದ ಕಲಿಕೆಯ ಸಾಧನವಾಗಿದೆ, ಸಾಧಕರನ್ನು ಜಾತಿಯ ಹಂಗಿಗೆ ಸೀಮಿತಗೊಳಿಸದೇ ಅವರ ಚಿಂತನೆ ಮತ್ತು ಅದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕೆಂದು ಕರೆ ನೀಡಿದರು.

ಕೆಂಗೇರಿ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ನಿಶ್ಚಲಾನಂದ ಸ್ವಾಮಿಜಿ ಮಾತನಾಡಿ, ಬಸವ ಜಯಂತಿ ಕೇವಲ ಆಚರಣೆಗೆ ಮಾತ್ರ ಸೀಮಿತಗೊಳಿಸಬಾರದು,ಪ್ರತಿಯೊಬ್ಬರೂ ಬಸವಣ್ಣನವರ ಚಿಂತನೆಗಳನ್ನು ಅನುಸರಿಸಬೇಕು. ಬಸವಣ್ಣನವರು ವಿಶ್ವಕ್ಕೆ ಗುರುವಾಗಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆಂದು ಹೇಳಿದರು.

ಮನುಷ್ಯನ ಮನಸ್ಸಿನಲ್ಲಿರುವ ದುಷ್ಟ ಬುದ್ದಿ ಹೋಗಲಾಡಿಸಲು ಹಾಗೂ ಸಾಧನೆಗೆ ಸ್ಫೂರ್ತಿ ತುಂಬಲು ಜಯಂತಿಗಳ ಆಚರಣೆಗೆ ಸರ್ಕಾರ ಅವಕಾಶ ಕಲ್ಪಿಸುತ್ತಿದೆ. ಮಹಾನೀಯರ ಜಯಂತಿಗಳನ್ನು ಒಂದೊಂದು ಸಮುದಾಯಕ್ಕೆ ಸೀಮಿತಗೊಳಿಸಿ ಆಚರಿಸುತ್ತಿರುವುದರಿಂದ ದೇಶ ಅಭಿವೃದ್ದಿಯಲ್ಲಿ ಹಿಂದುಳಿದಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ಎಂ.ಜಿ. ರಂಗಸ್ವಾಮಿ ವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಾದ ಕೃಷಿಕ ಸಮಾಜ ಅಧ್ಯಕ್ಷ ಕೆ.ಎಸ್ ಪ್ರಕಾಶ್, ಮನ್‌ಮುಲ್ ನಿರ್ಧೇಶಕ ಕೃಷ್ಣೇಗೌಡ, ತಾಲ್ಲೂಕು ವೈದ್ಯಾಧಿಕಾರಿ ಡಾ. ವೀರಭದ್ರಪ್ಪ, ಡಾ. ಬಿ.ಎಂ ಮಾಲಾ ಸೇರಿದಂತೆ ಇತರೆ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ವಚನ ಕುಮಾರಸ್ವಾಮಿ, ರೂಪ ಬಸವಣ್ಣನವರ ಬಗ್ಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸಿದ್ದಲಿಂಗಸ್ವಾಮಿ, ಜಾನಪದ ಕಲಾವಿದ ಮಹದೇವಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ. ಉಮಾ, ಮನ್‌ಮುಲ್ ನಿರ್ದೇಶಕ ಆರ್.ಎನ್ ವಿಶ್ವಾಸ್, ಮಾಜಿ ಅಧ್ಯಕ್ಷ ಎಂ.ವಿ. ಕೃಷ್ಣಶೆಟ್ಟಿ, ನಿರ್ದೆಶಕರಾದ ಗುರುಪ್ರಸಾದ್, ಎಂ.ಎಸ್ ದಯಾ ಶಂಕರ್, ಬಿ. ಮಹದೇವು, ಎಂ.ಎನ್ ಮಹೇಶ್‌ಕುಮಾರ್, ಕೆವಿಟಿ ಕುಮಾರ್, ಚಂದ್ರಮ್ಮ, ರೂಪ ಮಹೇಶ್ ಸೇರಿದಂತೆ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ