Friday, October 18, 2024

ಪ್ರಾಯೋಗಿಕ ಆವೃತ್ತಿ

ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಶಿಗ್ಗಾವಿಗೆ ತೆರಳುವ ಮುನ್ನ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅವರು ಬೊಮ್ಮಾಯಿ, ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಮಹತ್ವದ ಸಂಕಲ್ಪದ ಹಿನ್ನೆಲೆಯಲ್ಲಿ, ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದೆ ಎಂದು ಹೇಳಿಕೊಂಡಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಹಿರಿಯ ನಾಯಕರ ಸರಣಿ ರಾಜಕೀಯ ನಿವೃತ್ತಿ ಘಟನೆಗಳು ನಡೆಯುತ್ತಿದ್ದು, ಈಗಾಗಲೇ ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ತರೆಮರೆಗೆ ಸರಿದಿದ್ದಾರೆ. ಹೀಗಿರುವಾಗಿ ಸಿಎಂ ಬಸವರಾಜ ಬೊಮ್ಮಾಯಿ ರಾಜಕೀಯ ಜೀವನದಲ್ಲಿ ಬಿಜೆಪಿ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಎಂಬ ಕುತೂಹಲ ಮೂಡಿತ್ತು. ಆದರೆ ಬಿಜೆಪಿಯೂ ಅವರಿಗೆ ಶಿಗ್ಗಾವಿಯಿಂದ ಟಿಕೆಟ್ ನೀಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!