Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಮೇ 31ಕ್ಕೆ ವಿಶ್ವಗುರು ಬಸವೇಶ್ವರರ ೮೯೨ನೇ ಜಯಂತಿ : ಆನಂದ್

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಜಿಲ್ಲಾ ಬಸವ ಸಮಿತಿ ಹಾಗೂ ವೀರಶೈವ ಲಿಂಗಾಯತ ಸೌಹಾರ್ದ ಮತ್ತು ಸಹಕಾರಿ ಸಂಘಟನೆಗಳ ಸಹಕಾರದೊಂದಿಗೆ ವಿಶ್ವಗುರು ಬಸವೇಶ್ವರರ ೮೯೨ನೇ ಜಯಂತಿಯನ್ನು ಮೇ.೩೧ರ ಬೆಳಿಗ್ಗೆ ೧೦.೩೦ಕ್ಕೆ ನಗರದ ಕೆಎಸ್‌ಆರ್‌ಟಿಸಿ ಡಿಪೋ ಬಳಿಯ ಮೈಷುಗರ್ ಮೈದಾನದಲ್ಲಿ ಸಿದ್ದಪಡಿಸಲಾಗುವ ಶಿವಕುಮಾರಸ್ವಾಮೀಜಿ ವೇದಿಕೆಯಲ್ಲಿ ಆಯೋಜಿಸಲಾಗಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಎಸ್.ಆನಂದ್ ತಿಳಿಸಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಉತ್ತರಕನ್ನಡ ಜಿಲ್ಲೆಯ ಬಸವಧಾಮದ ಬಸವೇಶ್ವರಿ ಮಾತಾಜಿ ಅವರು ಬಸವ ದರ್ಶನ ಪ್ರವಚನವನ್ನು ನೀಡಲಿದ್ದಾರೆ ಎಂದರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ, ಕಾಡಸಿದ್ದೇಶ್ವರ ಮಠಾಧ್ಯಕ್ಷ ಡಾ.ಕರಿವೃಷಭದೇಶಿಕೇಂದ್ರ ಶಿವಯೋಗಿ ಸ್ವಾಮೀಜಿ, ಕನಕಪುರ ದೇಗುಲಮಠದ ಚನ್ನಬಸವ ಸ್ವಾಮೀಜಿ, ಮಳವಳ್ಳಿ ಹೊರಮಠದ ಚಂದ್ರಶೇಖರಸ್ವಾಮೀಜಿ, ಚಂದ್ರವನ ಆಶ್ರಮದ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ವೇದಿಕೆಯ ದಿವ್ಯಸಾನಿಧ್ಯವನ್ನು ವಹಿಸಲಿದ್ದಾರೆ ಎಂದು ಹೇಳಿದರು.

ಉಕ್ಕು ಮತ್ತು ಬೃಹತ್ ಕೈಗಾರಿಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಬೃಹತ್ ಕೈಗಾರಿಕೆಯ ರಾಜ್ಯ ಸಚಿವ ಎಂ.ಬಿ.ಪಾಟೀಲ್ ಬಸವೇಶ್ವರರ ಭಾವಚಿತ್ರ ಅನಾವರಣಗೊಳಿಸುವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಮಹದೇವ ಬಿದರಿ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಎಲ್ಲಾ ಪಕ್ಷಗಳ ಮುಖಂಡರು, ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು, ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಸಮಾಜ ಸೇವಕರು ಪಕ್ಞಾತೀತ, ಜಾತ್ಯಾತೀತವಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಅನ್ನದಾಸೋಹ ಮಾಡಲಿದ್ದು, ದೇಣಿಗೆ ನೀಡಲು ಇಚ್ಛಿಸುವವರು ಫೋನ್‌ಪೆ, ಗೂಗಲ್ ಪೇ ಮೂಲಕ ಎ.ಆನಂದ್: ೯೪೪೯೯೧೧೯೯೯, ಅರುಣ್: ೯೭೪೦೯೭೩೮೨೯ ಸಂಖ್ಯೆಗೆ ಹಣ ಕಳುಹಿಸುವಂತೆ ಕೋರಿದರು.

ಗೋಷ್ಠಿಯಲ್ಲಿ ಜಿಲ್ಲಾ ಬಸವ ಸಮಿತಿ ಅಧ್ಯಕ್ಷ ಎಂ.ಬಿ.ರಾಜಶೇಖರ್, ಅರುಣ್‌ಕುಮಾರ್, ಕೆ.ಎಸ್.ದರ್ಶನ್, ಷಡಕ್ಷರಿ, ರಮೇಶ್, ದೀಪಕ್‌ಕುಮಾರ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ