Thursday, November 19, 2026

ಪ್ರಾಯೋಗಿಕ ಆವೃತ್ತಿ

ಸ್ಪರ್ಧಾತ್ಮಕ ಪರೀಕ್ಷೆಗಳ ಬುನಾದಿ ತರಬೇತಿ ಕಾರ್ಯಾಗಾರ ; ಟಿ.ತಿಮ್ಮೇಗೌಡ

ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್ ರಜತ ಮಹೋತ್ಸವ ಸಂಭ್ರಮದ ಅಂಗವಾಗಿ ಅ.11ರಂದು ಬೆಳಿಗ್ಗೆ 10ಗಂಟೆಗೆ ಕೆಎಎಸ್, ಐಎಎಸ್, ಬ್ಯಾಂಕಿಂಗ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಹಂಚಿಕೊಳ್ಳಲು ‘ಬುನಾದಿ ತರಬೇತಿ ಕಾರ‍್ಯಾಗಾರ’ವನ್ನು ಟ್ರಸ್ಟ್ ಡಾ.ಹೆಚ್.ಡಿ.ಚೌಡಯ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಟಿ.ತಿಮ್ಮೇಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷದಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಕಾರ‍್ಯಾಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ, ಮಾರ್ಗದರ್ಶನ ಮತ್ತು ತರಬೇತಿಯನ್ನು ನೀಡಲಾಗುತ್ತದೆ ಎಂದರು.

ಕೆನರಾ ಬ್ಯಾಂಕ್‌ನ ನಿವೃತ್ತ ವ್ಯವಸ್ಥಾಪಕ ಡಾ.ಎಸ್.ಟಿ.ರಾಮಚಂದ್ರ ನೇತೃತ್ವದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬಗ್ಗೆ ಹಾಗೂ ಡಾ.ಹೇಮಚಂದ್ರ ಅವರ ನೇತೃತ್ವದಲ್ಲಿ ಐಎಎಸ್, ಕೆಎಎಸ್ ಸೇರಿ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವ, ಸವಾಲು, ಪರೀಕ್ಷಾ ವಿಧಾನ, ಪಠ್ಯಕ್ರಮ ಮತ್ತು ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಮಾರ್ಗದರ್ಶನ  ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಟಿ.ತಿಮ್ಮೇಗೌಡ, ಕಾರ‍್ಯಾಧ್ಯಕ್ಷ ಡಾ.ರಾಮಲಿಂಗಯ್ಯ, ಉಪಾಧ್ಯಕ್ಷ ಡಾ.ಎಂ.ಮಾದಯ್ಯ, ಕಾರ‍್ಯದರ್ಶಿ ಡಾ.ಕೆ.ಬಿ.ಬೋರಯ್ಯ, ಜಂಟಿ ಕಾರ‍್ಯದರ್ಶಿ ಡಾ.ಎಸ್.ಟಿ.ರಾಮಚಂದ್ರ, ಸಂಘಟನಾ ಕಾರ್ಯದರ್ಶಿ ಡಿ.ಎಸ್.ದೇವರಾಜು, ಮುಖ್ಯ ಸಂಚಾಲಕ ಡಿ.ರವಿಕುಮಾರ್, ಖಜಾಂಚಿ ಎಸ್.ಲೋಕೇಶ್, ಧರ್ಮದರ್ಶಿ ಎಸ್.ಎನ್.ಶಾರದ ರಮೇಶ್‌ರಾಜು, ಸಿ.ಎಲ್.ನಂಜರಾಜು, ಡಾ.ಎಚ್.ಎ.ವೆಂಕಟಪ್ಪ ಭಾಗವಹಿಸಲಿದ್ದಾರೆ ಎಂದು ವಿವರಣೆ ನೀಡಿದರು.

ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕರ‍್ಯಾಗಾರದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಡಾ.ರಾಮಲಿಂಗಯ್ಯ, ಉಪಾಧ್ಯಕ್ಷ ಡಾ.ಎಂ.ಮಾದಯ್ಯ, ಕಾರ‍್ಯದರ್ಶಿ ಡಾ.ಕೆ.ಬಿ.ಬೋರಯ್ಯ, ಜಂಟಿ ಕಾರ‍್ಯದರ್ಶಿ ಡಾ.ಎಸ್.ಟಿ.ರಾಮಚಂದ್ರ, ಸಂಘಟನಾ ಕಾರ್ಯದರ್ಶಿ ಡಿ.ಎಸ್.ದೇವರಾಜು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ